Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

'ಕರ್ನಾಟಕ ಸಂಘ ಶಾರ್ಜಾ' ನೂತನ ಸಾರಥಿಯಾಗಿ ವಿಶ್ವನಾಥ್ ಶೆಟ್ಟಿ ಪ್ರಮಾಣ ವಚನ ಸ್ವೀಕಾರ; ನೂತನ ಸದಸ್ಯರ ಪದಗ್ರಹಣ

ದುಬೈ : ಯುಎಇಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನಿವಾಸಿ ಕನ್ನಡಿಗರನ್ನು ಒಗ್ಗೂಡಿಸುತ್ತಿರುವ ಕರ್ನಾಟಕ ಸಂಘ ಶಾರ್ಜಾದ 2026–2028ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಂಘದ ಸಾಧನೆಗಳು ಮತ್ತು ಕಾರ್ಯಚಟುವಟಿಕೆಗಳ ಕುರಿತು ಸತೀಶ್ ಪೂಜಾರಿ ಮಾಹಿತಿ ನೀಡಿದರು. ಸಂಘದ ಬೈಲಾ ಕುರಿತು ಗಣೇಶ್ ರೈ ಸದಸ್ಯರಿಗೆ ವಿವರಿಸಿದರು. ಬಳಿಕ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಪರಿಚಯಿಸಲಾಯಿತು.

ಸಂಘದ ಮಾಜಿ ಅಧ್ಯಕ್ಷ ಗಣೇಶ್ ರೈ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಅಧಿಕೃತವಾಗಿ ಪ್ರಮಾಣವಚನ ಬೋಧಿಸಲಾಯಿತು. ಈ ವೇಳೆ ವಿಶ್ವನಾಥ್ ಶೆಟ್ಟಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ, ಕನ್ನಡ ಭಾಷೆ, ಸಂಸ್ಕೃತಿಯ ಬೆಳವಣಿಗೆ ಹಾಗೂ ಯುಎಇಯಲ್ಲಿರುವ ಕನ್ನಡಿಗರನ್ನು ಇನ್ನಷ್ಟು ಸಂಘಟಿತಗೊಳಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು. ಉಪಾಧ್ಯಕ್ಷರಾಗಿ ಅಜ್ಮಲ್ ಸಯ್ಯದ್, ಪ್ರಧಾನ ಕಾರ್ಯದರ್ಶಿಯಾಗಿ ವಿಘ್ನೇಶ್ ಕುಂದಾಪುರ, ಖಜಾಂಚಿಯಾಗಿ ಸುಗಂಧರಾಜ್ ಬೇಕಲ್, ಜಂಟಿ ಕಾರ್ಯದರ್ಶಿಯಾಗಿ ದಿನೇಶ್ ಸಾಲಿಯಾನ್, ಜಂಟಿ ಖಜಾಂಚಿಯಾಗಿ ರಘುರಾಮ್ ಶೆಟ್ಟಿಗಾರ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರೀತೇಶ್ ಅಂಚನ್, ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರೇಮ್ ಪೂಜಾರಿ, ಕ್ರೀಡಾ ಕಾರ್ಯದರ್ಶಿಯಾಗಿ ಅಮರ್ ಉಮೇಶ್ ಹಾಗೂ ಜಂಟಿ ಕ್ರೀಡಾ ಕಾರ್ಯದರ್ಶಿಗಳಾಗಿ ಜೀವನ್ ಮತ್ತು ಮೊಹಮ್ಮದ್ ಅಬ್ರಾರ್ ಉಲ್ಲಾ ಶರೀಫ್ ಪದಗ್ರಹಣ ಮಾಡಿ ಅಧಿಕಾರ ಸ್ವೀಕರಿಸಿದರು.

ಇದೇ ವೇಳೆ ಸುದರ್ಶನ್ ಹೆಗ್ಡೆ, ಸುರೇಶ್ ಎನ್. ಶೆಟ್ಟಿ, ಕಿರಣ್, ಸುಜಿತ್ ಫೆರ್ನಾಂಡಿಸ್, ಸುಮನ್ ಜಾಯ್ ವಾಸ್, ವಿಠಲ್ ರಿಷನ್ ನಾಯಕ್ ಹಾಗೂ ವಿಜಯ್ ಕುಮಾರ್ ಶೆಟ್ಟಿ ಗಾಣದಮೂಲೆ ಅವರನ್ನು ಸಂಘದ ನೂತನ ಸದಸ್ಯರಾಗಿ  ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಸಲಹಾ ಮಂಡಳಿಯ ನಿರ್ದೇಶಕರಾದ ಹರೀಶ್ ಶೇರಿಗಾರ್, ಜೋಸೆಫ್ ಮಥಾಯಿಸ್ ಹಾಗೂ ರಾಮಚಂದ್ರ ಹೆಗ್ಡೆ ಉಪಸ್ಥಿತರಿದ್ದು ನೂತನ ತಂಡಕ್ಕೆ ಶುಭ ಹಾರೈಸಿದರು. ಸಂಘದ ಸಲಹೆಗಾರರಾದ ಎಂ.ಇ. ಮೂಳೂರು, ಗಣೇಶ್ ರೈ, ಸತೀಶ್ ಪೂಜಾರಿ ಹಾಗೂ ನೋಯೆಲ್ ಡಿ ಅಲ್ಮೇಡಾ ಅವರು ಸಂಘದ ಮುಂದಿನ ಕಾರ್ಯಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಿದರು.

ಅಧ್ಯಕ್ಷ ವಿಶ್ವನಾಥ್ ಶೆಟ್ಟಿ ಮಾತನಾಡಿ, "ಕರ್ನಾಟಕ ಸಂಘ ಶಾರ್ಜಾವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಜೊತೆಗೆ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ಸಮಾಜಮುಖಿ ಕಾರ್ಯಕ್ರಮಗಳನ್ನು ವಿಸ್ತರಿಸಿ ಎಲ್ಲ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಗುರಿ ಹೊಂದಿದ್ದೇವೆ" ಎಂದು ಹೇಳಿದರು.

ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೀತೇಶ್ ಅಂಚನ್ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಕುಂದಾಪುರ ವಂದಿಸಿದರು. 

Post a Comment

0 Comments

ಜಾಹೀರಾತು

Responsive Advertisement