ಬದಿಯಡ್ಕ : ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿದ್ದ ನೆಕ್ರಾಜೆ ಸಮೀಪದ ಪೈಕ ನಿವಾಸಿಯಾದ ಯುವಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಪೈಕ ನಿವಾಸಿಗಳಾದ ಬಾಲಕೃಷ್ಣ ಮತ್ತು ಮಲ್ಲಿಕಾ ದಂಪತಿಯ ಪುತ್ರ ಜ್ಯೋತಿಷ್ (26) ಮೃತ ಯುವಕ. ಬುಧವಾರ ಬೆಳಿಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಒಂದು ತಿಂಗಳ ಹಿಂದೆ ಊರಿಗೆ ಭೇಟಿ ನೀಡಿ ಮರಳಿ ಬೆಂಗಳೂರಿಗೆ ಕೆಲಸಕ್ಕೆ ತೆರಳಿದ್ದ ಜ್ಯೋತಿಷ್ ಅವರ ಅಕಾಲಿಕ ನಿಧನ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಮೂಡಿಸಿದೆ. ಮೃತದೇಹವನ್ನು ಸ್ವಗ್ರಾಮಕ್ಕೆ ತರಲಾಗಿದ್ದು, ಮನೆಯ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೃತರು ತಂದೆ-ತಾಯಿ ಹಾಗೂ ಸಹೋದರಿಯರಾದ ಮನೀಷಾ, ಕಾವ್ಯಾ ಮತ್ತು ದಿವ್ಯಾ ಎಂಬಿವರನ್ನಗಲಿದ್ದಾರೆ.
*ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್*
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments