Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ತವರು ಮನೆಯ ಸಮೀಪದ ಶೆಡ್‌ನಲ್ಲಿ ಗೃಹಿಣಿ ಆತ್ಮಹತ್ಯೆ

ಮುಳ್ಳೇರಿಯ : ಕಿನ್ನಿಂಗಾರು ಸಮೀಪದ ಬೀಜದಕಟ್ಟೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಲ್ಕ ನಿವಾಸಿ ನಾರಾಯಣ ಎಂಬವರ ಪತ್ನಿ ಲಕ್ಷ್ಮಿ ಯಾನೆ ನಳಿನಿ (60) ಎಂದು ಗುರುತಿಸಲಾಗಿದೆ.

ಮೃತರು  ಕಿನ್ನಿಂಗಾರು ಬಳಿಯ ಬೀಜದಕಟ್ಟೆಯಲ್ಲಿರುವ ತಮ್ಮ ತಾಯಿಯ ಮನೆಯ ಸಮೀಪದ ಶೆಡ್‌ನಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಊಟ ಮಾಡಿ ಮಲಗಲು ತೆರಳಿದ ಇವರು ಶನಿವಾರ ಬೆಳಿಗ್ಗೆ ಎದ್ದು ನೋಡಿದಾಗ ಕಾಣೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಶೆಡ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಕುರಿತು ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಯಿತು.

Post a Comment

0 Comments

ಜಾಹೀರಾತು

Responsive Advertisement