ಬದಿಯಡ್ಕ: ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 13 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.
ಪಳ್ಳತ್ತಡ್ಕದ ರಮೇಶ (43) ಬಂಧಿತ ಆರೋಪಿ. ಬದಿಯಡ್ಕ ಎಸ್‌ಐ ಸುನಿಲ್ ಕುಮಾರ್ ಹಾಗೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿದೆ. ಹಿರಿಯ ಸಿವಿಲ್ ಪೊಲೀಸ್ ಅಧಿಕಾರಿ ಗೋಕುಲ್, ಸಿವಿಲ್ ಪೊಲೀಸ್ ಅಧಿಕಾರಿಗಳಾದ ಶಿಬಿನ್ ಮತ್ತು ಧನೇಶ್ ಅವರು ಪೊಲೀಸ್ ತಂಡದಲ್ಲಿದ್ದರು.
ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಶಾಲೆಗೆ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಆರೋಪಿ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪ್ರಕರಣ ದಾಖಲಾಗಿದೆ.
ವಿವಿಧ ಸ್ಥಳಗಳ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರು, ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಗುರುತಿಸಿ ಬಂಧಿಸಿದ್ದಾರೆ.

0 Comments