Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸ್ವರ್ಗ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಪೆರ್ಲ : ಸ್ವರ್ಗ ಸ್ವಾಮಿ ವಿವೇಕಾನಂದ ಎ.ಯು.ಪಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಗೀತಾಕುಮಾರಿ ಬಿ ಧ್ವಜಾರೋಹಣ ನೆರವೇರಿಸಿದರು. ನಂತರ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಾಜೇಂದ್ರ ಸ್ವರ್ಗ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪಡ್ರೆ ಸರಕಾರೀ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಶಿಕ್ಷಕರಾದ ದಿನೇಶ್ ಮಾಸ್ತರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಕ್ಕಳಿಗೆ ಸ್ವಾತಂತ್ರ್ಯ ಇತಿಹಾಸದೊಂದಿಗೆ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಲ್.ಎಸ್.ಎಸ್ , ಯು.ಎಸ್.ಎಸ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಹಾಗೂ ಎಸ್.ಎಸ್ .ಎಲ್.ಸಿ ಪರೀಕ್ಷೆಯಲ್ಲಿ ಎ ಪ್ಲಸ್ ಪಡೆದ ಶಾಲಾ ಹಳೆ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳು, ರಕ್ಷಕರು, ಶಿಕ್ಷಕರು ಮತ್ತು ದೇಶಾಭಿಮಾನಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಗೀತಾಕುಮಾರಿ ಬಿ ಸ್ವಾಗತಿಸಿ, ಶಿಕ್ಷಕ ಸಚ್ಚಿದಾನಂದ ಮೊಗೇರು ವಂದಿಸಿದರು. 7ನೇ ವಿದ್ಯಾರ್ಥಿಗಳಾದ ಸಾನ್ವಿಕಾ ಮತ್ತು ರಕ್ಷಿತಾ ರೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Post a Comment

0 Comments

ಜಾಹೀರಾತು

Responsive Advertisement