ಕಣ್ಣೂರು : ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಹಾಗೂ ಗೃಹ ಸಚಿವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕುಖ್ಯಾತ ಗ್ಯಾಂಗ್‌ಸ್ಟಾರ್ ಅರ್ಜುನ್ ಆಯಂಕಿ ವಿರುದ್ಧ ಕಾಪಾ ಕಾಯ್ದೆ ಜಾರಿಗೊಳಿಸಲಾಗಿದೆ.
ಅರ್ಜುನ್ ಆಯಂಕಿ ವಿರುದ್ಧ ಕಾಪಾ ಕಾಯ್ದೆ ಜಾರಿಗೊಳಿಸುವಂತೆ ಕಣ್ಣೂರು ನಗರ ಪೊಲೀಸ್ ಆಯುಕ್ತರು ನೀಡಿದ್ದ ಶಿಫಾರಸಿಗೆ ಜಿಲ್ಲಾಧಿಕಾರಿ ಅನುಮೋದನೆ ನೀಡಿದ್ದಾರೆ. ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಯಾಗಿದ್ದು, ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗುವ ಸಾಧ್ಯತೆ ಇದೆ ಎಂಬ ಪೊಲೀಸ್ ವರದಿ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಕಾಪಾ ಕಾಯ್ದೆಯಡಿ ಅವರನ್ನು ಮುಂಜಾಗ್ರತಾ ಬಂಧನದಲ್ಲಿಡಲು ಆದೇಶಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಅರ್ಜುನ್ ವಿರುದ್ಧ ಕೊಲೆ ಯತ್ನ, ಚಿನ್ನ ಕಳ್ಳಸಾಗಣೆ, ಚಿನ್ನ ದರೋಡೆ ಹಾಗೂ ಕ್ವಾಟೇಷನ್ ಸೇರಿದಂತೆ ಸುಮಾರು 20 ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಪೊಲೀಸ್ ಅಧಿಕಾರಿಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಬೆದರಿಕೆ ಹಾಕಿದ ಪ್ರಕರಣವೂ ಅವರ ವಿರುದ್ಧ ದಾಖಲಾಗಿತ್ತು.

0 Comments