Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸ್ವಾತಂತ್ರ್ಯ: ಹೋರಾಟ, ತ್ಯಾಗ ಮತ್ತು ಸಾಧನೆ

ಭಾರತವು ಸುಮಾರು 200 ವರ್ಷಗಳ ಕಾಲ ಬ್ರಿಟಿಷರ ವಸಾಹತುಶಾಹಿ ಆಳ್ವಿಕೆಗೆ ಒಳಪಟ್ಟಿತ್ತು. ದೇಶದ ಸಂಪತ್ತು ಲೂಟಿಯಾಗುವುದರ ಜೊತೆಗೆ ಭಾರತೀಯರು ತೀವ್ರವಾದ ದಬ್ಬಾಳಿಕೆ, ಶೋಷಣೆ ಮತ್ತು ಹಸಿವನ್ನು ಅನುಭವಿಸಿದರು. ಈ ಅನ್ಯಾಯದ ವಿರುದ್ಧ ದೇಶದ ಮೂಲೆ ಮೂಲೆಗಳಿಂದ ಸ್ವಾತಂತ್ರ್ಯ ಹೋರಾಟಗಾರರು ಧ್ವನಿ ಎತ್ತಿದರು. ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಸರ್ದಾರ್ ವಲ್ಲಭಭಾಯಿ ಪಟೇಲ್, ಲಾಲಾ ಲಜಪತ್ ರಾಯ್ ಮುಂತಾದ ಮಹಾನ್ ನಾಯಕರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. 

ಪ್ರತಿವರ್ಷ ಆಗಸ್ಟ್ 15 ರಂದು ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ದೇಶಭಕ್ತಿಯಿಂದ ಆಚರಿಸಲಾಗುತ್ತದೆ. 1947 ರ ಇದೇ ದಿನದಂದು ಭಾರತವು ಬ್ರಿಟಿಷರ ನೂರಾರು ವರ್ಷಗಳ ದಾಸ್ಯದಿಂದ ಮುಕ್ತಿ ಪಡೆದು, ಸ್ವತಂತ್ರ ಸಾರ್ವಭೌಮ ರಾಷ್ಟ್ರವಾಗಿ ಮೂಡಿಬಂತು.

ಸ್ವಾತಂತ್ರ್ಯ ದಿನಾಚರಣೆಯು ಕೇವಲ ಒಂದು ಹಬ್ಬವಲ್ಲ, ಬದಲಿಗೆ ನಮ್ಮ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವ ಮತ್ತು ಗೌರವಿಸುವ ಪವಿತ್ರ ದಿನವಾಗಿದೆ. ಇದು ದೇಶದ ಪ್ರತಿಯೊಬ್ಬ ನಾಗರಿಕನಲ್ಲಿಯೂ ದೇಶಪ್ರೇಮ, ರಾಷ್ಟ್ರೀಯತೆ ಮತ್ತು ಭ್ರಾತೃತ್ವದ ಭಾವನೆಯನ್ನು ಬಡಿದೆಬ್ಬಿಸುತ್ತದೆ. ಸ್ವತಂತ್ರ ಭಾರತದಲ್ಲಿ ನಮಗೆ ದೊರೆತಿರುವ ಮೂಲಭೂತ ಹಕ್ಕುಗಳು, ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯವನ್ನು ಅರಿಯಲು ಈ ದಿನ ಪ್ರೇರಣೆಯಾಗಿದೆ.

ಈ ಸಂಭ್ರಮದ ದಿನದಂದು  ಪ್ರಧಾನ ಮಂತ್ರಿಯವರು ನವದೆಹಲಿಯ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನುಾರಿಸಿ, ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ದೇಶದ ಎಲ್ಲಾ ಶಾಲಾ-ಕಾಲೇಜುಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಸಿಹಿ ಹಂಚಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಗೀತೆಗಳು ಮತ್ತು ಭಾಷಣ ಸ್ಪರ್ಧೆಗಳು ಜರುಗುತ್ತವೆ. ಭಾರತೀಯ ಸಶಸ್ತ್ರ ಪಡೆಗಳು ತಮ್ಮ ಶಕ್ತಿ ಪ್ರದರ್ಶನ ಮತ್ತು ಸಾಹಸಗಳನ್ನು ಪ್ರದರ್ಶಿಸಿ ದೇಶಕ್ಕೆ ರಕ್ಷಣೆ ನೀಡುವ ಭರವಸೆ ನೀಡುತ್ತವೆ.

ಸ್ವಾತಂತ್ರ್ಯವೆಂದರೆ ಕೇವಲ ಬಂಧನಗಳಿಂದ ಮುಕ್ತಿ ಪಡೆಯುವುದಲ್ಲ; ದೇಶದ ಜವಾಬ್ದಾರಿಯುತ ನಾಗರಿಕರಾಗಿರುವುದೂ ಆಗಿದೆ. ನಾವು ದೇಶದ ಕಾನೂನುಗಳನ್ನು ಪಾಲಿಸಿ, ಪರಿಸರವನ್ನು ರಕ್ಷಿಸಿ, ಪರಸ್ಪರ ಗೌರವದಿಂದ ನಡೆದು, ದೇಶದ ಅಭಿವೃದ್ಧಿಗೆ ನಮ್ಮ ಕೈಲಾದ ಕೊಡುಗೆ ನೀಡಬೇಕು.  ಸ್ವಾತಂತ್ರ್ಯ ಎಂಬುದು ಅನಾಯಾಸವಾಗಿ ಸಿಕ್ಕಿದ್ದಲ್ಲ; ಅದಕ್ಕೇ ಹಳೇ ತಲೆಮಾರಿನ ಅಸಂಖ್ಯಾತ ಜನರ ಬಲಿದಾನವಿದೆ. ಆ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವುದು ಮತ್ತು ದೇಶದ ಅಭಿವೃದ್ಧಿಗೆ ಶ್ರಮಿಸುವುದು ಇಂದಿನ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ.  ಸ್ವಾತಂತ್ರ್ಯ ನಮ್ಮ ಜನ್ಮಸಿದ್ಧ ಹಕ್ಕು ಮಾತ್ರವಲ್ಲ, ಅದನ್ನು ಕಾಪಾಡಿಕೊಳ್ಳುವುದು ನಮ್ಮ ಪರಮ ಪವಿತ್ರ ಕರ್ತವ್ಯ. ನಾವು ಜಾತಿ, ಧರ್ಮ, ಭಾಷೆಗಳನ್ನು ಮರೆತು ಒಂದಾಗಿ ನಿಂತು ದೇಶವನ್ನು ರಕ್ಷಸಿಕೊಳ್ಳಬೇಕಾಗಿದೆ.

Post a Comment

0 Comments

ಜಾಹೀರಾತು

Responsive Advertisement