ಮಧೂರು : ಮಧೂರು ಪಂಚಾಯತ್ ಯುವ ಬಂಟರ ಸಂಘದ ವತಿಯಿಂದ ‘ಆಟಿಡೊಂಜಿ ದಿನ ಪರಕ್ಕಿಲಡ್’ ಕಾರ್ಯಕ್ರಮ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಬಂಟ ಮಹಿಳೆಯರ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಕಾಸರಗೋಡಿನ ಹಿರಿಯ ನ್ಯಾಯವಾದಿ, ಬಂಟರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಸದಸ್ಯ ಸದಾನಂದ ರೈ ಉದ್ಘಾಟಿಸಿದರು. ಮಧೂರು ಯುವ ಬಂಟರ ಸಂಘದ ಅಧ್ಯಕ್ಷ ಹಾಗೂ ಪಂಚಾಯತ್ ಸದಸ್ಯ ನವನೀತ್ ರೈ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿಮಧೂರು ಬಂಟರ ಸಂಘದ ಸ್ಥಾಪಕ ಅಧ್ಯಕ್ಷ ಮತ್ತು ಕಾಸರಗೋಡು ವಲಯ ಸಂಘದ ಕೋಶಾಧಿಕಾರಿ ಅಶೋಕ ರೈ ಮಾಯಿಪ್ಪಾಡಿಗುತ್ತು ಮಧೂರು ಮಹಿಳಾ ಬಂಟರ ಸಂಘದ ಗೌರವಾಧ್ಯಕ್ಷೆ ಉದಾರ ದಾನಿ, ಜನಪ್ರಿಯ ನಾಟಿ ವೈದ್ಯೆ ಡಾ. ಯಮುನಾ ಎಸ್ ಶೆಟ್ಟಿ, ಅಧ್ಯಕ್ಷೆ ಶ್ಯಾಮಲಾ ಎಂ ಶೆಟ್ಟಿ ಕಾಸರಗೋಡು ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷೆ ಶ್ಯಾಮಲಾ ಎಂ ಶೆಟ್ಟಿ ಮಧೂರು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ರೈ ನಾಯಕ್ಕೋಡು ಯುವ ಬಂಟರ ಸಂಘದ ಪದಾಧಿಕಾರಿಗಲಾದ ಪ್ರಧಾನ ಕಾರ್ಯದರ್ಶಿ ಸಂತೋಷ್ ರೈ ಗಂಗೆ, ಶಿವರಾಜ ರೈ ಕಾಲಿoಗಾಡು ಮೊದಲಾದವರು ಉಪಸ್ಥಿತರಿದ್ದರು. ಕರ್ನಾಟಕದ ಖ್ಯಾತ ನಿರೂಪಕ ಶ್ರೇಯಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು, ಆಟಿ ತಿಂಗಳ ವಿಶೇಷ ತಿಂಡಿ-ತಿನಿಸುಗಳ ಪ್ರದರ್ಶನ, ಬಂಟ ಯುವಕರು ಹೊಸಮನೆ ಇವರಿಂದ ಯಕ್ಷಗಾನ ಬಯಲಾಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸೇರಿದಂತೆ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಂಗೀತ ಹಾಗೂ ಮಕ್ಕಳ ಆಕರ್ಷಕ ನೃತ್ಯ ಕಾರ್ಯಕ್ರಮಗಳು ಗಮನಸೆಳೆದವು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost
.jpeg)
.jpeg)
.jpeg)
0 Comments