ಕಾಸರಗೋಡು : ಬಂದ್ಯೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಆಂಬುಲೆನ್ಸ್‌ನಲ್ಲಿದ್ದ ರೋಗಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಮಂಗಳವಾರ ರಾತ್ರಿ 11ರ ಸುಮಾರಿಗೆ ಅಪಘಾತ ಸಂಭವಿಸಿದೆ. ಉಪ್ಪಳ ಕೆಎಸ್‌ಇಬಿಯ ಗುತ್ತಿಗೆದಾರ ಹಾಗೂ ಬಂದ್ಯೋಡು ಅಡ್ಕ ನಿವಾಸಿ ಅಶೋಕ (41) ಮೃತಪಟ್ಟವರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಉಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶೋಕ್ ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸೇವಾಭಾರತಿ ಆಂಬುಲೆನ್ಸ್ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಅಶೋಕ್ ಅವರ ಪತ್ನಿ ಪ್ರತಿಭಾ, ಸಹೋದರ ರಾಜೇಶ್, ರಾಜೇಶ್ ಅವರ ಪತ್ನಿ ಹಾಗೂ ಆಂಬುಲೆನ್ಸ್ ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅಶೋಕ್ ಅವರನ್ನು ಮೊದಲು ಉಪ್ಪಳದ ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಅಶೋಕ್ ಅವರಿಗೆ ತನುಷ್ ಎಂಬ ಏಕೈಕ ಪುತ್ರನಿದ್ದಾನೆ.

0 Comments