ಕಣ್ಣೂರು : ಸರ್ಕಾರಿ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯಿನಿಯೋರ್ವೆಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಶಾಲಾ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಣ್ಣೂರು ಗ್ರಾಮೀಣ ಪೊಲೀಸ್ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ, ಮುಖ್ಯಶಿಕ್ಷಕಿಗೆ ಫೋನ್ ಮೂಲಕ ಹಾಗೂ ನೇರವಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕಿರುಕುಳ ಮುಂದುವರಿದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡುವುದಾಗಿ ಮುಖ್ಯಶಿಕ್ಷಕಿ ಎಚ್ಚರಿಸಿದ್ದರು. ಇದರಿಂದ ಆರೋಪಿ ಮುಖ್ಯಶಿಕ್ಷಕಿಗೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಮುಖ್ಯಶಿಕ್ಷಕಿ ಈ ವಿಷಯವನ್ನು ಶಾಲೆಯ ಪಿಟಿಎ ಪದಾಧಿಕಾರಿಗಳ ಗಮನಕ್ಕೆ ತಂದಿದ್ದರು. ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಪಿಟಿಎಯ ಒತ್ತಾಯದ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ರಿಮಾಂಡ್‌ಗೆ ಕಳುಹಿಸಿದೆ.

0 Comments