ನವದೆಹಲಿ : ಕೇರಳ ರಾಜ್ಯದ ಹೆಸರನ್ನು ‘ಕೇರಳ’ ಬದಲು ‘ಕೇರಳಂ’ ಎಂದು ಬದಲಾಯಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದೆ.
ಎರಡು ವರ್ಷಗಳ ಹಿಂದೆ ರಾಜ್ಯ ವಿಧಾನಸಭೆ ಈ ಕುರಿತು ನಿರ್ಣಯ ಅಂಗೀಕರಿಸಿದ ಬಳಿಕ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. 2024ರ ಜೂನ್‌ನಲ್ಲಿ ಕೇರಳ ಸರ್ಕಾರವು ರಾಜ್ಯ ವಿಧಾನಸಭೆ ಅಂಗೀಕರಿಸಿದ್ದ ನಿರ್ಣಯವನ್ನು ಕೇಂದ್ರಕ್ಕೆ ಕಳುಹಿಸಿತ್ತು.
ನಂತರ ರಾಷ್ಟ್ರಪತಿಗಳು ಮಸೂದೆಯನ್ನು ರಾಜ್ಯ ವಿಧಾನಸಭೆಗೆ ಕಳುಹಿಸಿ ಅಭಿಪ್ರಾಯ ಕೇಳಿದ್ದರು. ಇದಾದ ಬಳಿಕ ಮಸೂದೆಯನ್ನು ಬೆಂಬಲಿಸಿ ರಾಜ್ಯ ವಿಧಾನಸಭೆ ಸರ್ವಾನುಮತದ ನಿರ್ಣಯ ಅಂಗೀಕರಿಸಿತ್ತು.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ‘ಕೇರಳ (ಹೆಸರು ಬದಲಾವಣೆ) ಮಸೂದೆ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಿದರು. ಸಂವಿಧಾನದ ಮೊದಲ ಅನುಸೂಚಿಯಲ್ಲಿ ರಾಜ್ಯದ ಹೆಸರನ್ನು ‘ಕೇರಳ’ ಬದಲು ‘ಕೇರಳಂ’ ಎಂದು ಬದಲಾಯಿಸುವುದು ಮಸೂದೆಯ ಉದ್ದೇಶವಾಗಿದೆ.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments