Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕುಂಬಳೆಯಲ್ಲಿ ಆಟೋ ಕಾರ್ಮಿಕರ ಪರ ಸಿಐಟಿಯು ಪ್ರತಿಭಟನೆ


ಕುಂಬಳೆ: ಆಟೋ ಕಾರ್ಮಿಕರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ನಡೆಸಿದ ಪ್ರಯತ್ನವನ್ನು ಖಂಡಿಸಿ, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಿಐಟಿಯು ನೇತೃತ್ವದಲ್ಲಿ ಕುಂಬಳೆ ಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ನಡೆಯಿತು.

ಸಿಐಟಿಯು ಕುಂಬಳೆ ಏರಿಯಾ ಅಧ್ಯಕ್ಷ ವಿಠಲ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಎ. ರಹ್ಮಾನ್ ಉದ್ಘಾಟಿಸಿ ಮಾತನಾಡಿದರು. ಸಿಐಟಿಯು ಏರಿಯಾ ಕಾರ್ಯದರ್ಶಿ ಪಿ.ಎ. ಇಬ್ರಾಹಿಂ ಸ್ವಾಗತಿಸಿದರು.

ಸಭೆಯಲ್ಲಿ ಸಿಪಿಐಎಂ ಏರಿಯಾ ಕಾರ್ಯದರ್ಶಿ ಸುಬೈರ್, ಸಿಐಟಿಯು ಆಟೋ ಚಾಲಕರ ಏರಿಯಾ ಅಧ್ಯಕ್ಷ ಜಿ. ರತ್ನಾಕರನ್ ಹಾಗೂ ಸಿಐಟಿಯು ಪಂಚಾಯತ್ ಕಾರ್ಯದರ್ಶಿ ಪ್ರಸಾದ್ ಮಾತನಾಡಿದರು.

ಕುಂಬಳೆ ಎಫ್‌ಎಚ್‌ಸಿಯಲ್ಲಿ ಅಗತ್ಯ ಸಂಖ್ಯೆಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎನ್ನಲಾದ ಆಟೋ ಚಾಲಕರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಪ್ರಕರಣದ ಕುರಿತು ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಆಟೋ ಕಾರ್ಮಿಕರ ನ್ಯಾಯಯುತ ಹಕ್ಕುಗಳು ಹಾಗೂ ಸುರಕ್ಷತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ಸಿಐಟಿಯು ಮುಖಂಡರು, ಆಟೋ ಚಾಲಕರು ಹಾಗೂ ಕಾರ್ಮಿಕರು ಭಾಗವಹಿಸಿದ್ದರು.

Post a Comment

0 Comments

ಜಾಹೀರಾತು

Responsive Advertisement