ಬೆಂಗಳೂರು : ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್ ಹಾಗೂ ಕಾರಿಗೆ ವೇಗವಾಗಿ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ನಡೆದಿದೆ.
ಮೃತರನ್ನು ನವೀನ್(33) ಎಂದು ಗುರುತಿಸಲಾಗಿದೆ. ವಿಜ್ಞಾನ ನಗರ ಸಿಗ್ನಲ್‌ನಲ್ಲಿ ನವೀನ್ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಮೊದಲು ಮತ್ತೊಂದು ಕಾರಿಗೆ, ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನವೀನ್ ಬೈಕ್‌ನಿಂದ ಸುಮಾರು 50 ಅಡಿ ದೂರಕ್ಕೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನವೀನ್ ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 63 ವರ್ಷದ ಕಾರು ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

0 Comments