ಕಾಸರಗೋಡು : ಕುಂಬಳೆ ಜಿಎಸ್‌ಬಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಬಹುಮಹಡಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ವೇಳೆ ವೇದಿಕೆಯ ಪ್ರವೇಶ ದ್ವಾರವನ್ನು ತಡೆದ ಆರೋಪದ ಮೇಲೆ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಸೇರಿದಂತೆ 10 ಮಂದಿ ವಿರುದ್ಧ ಕುಂಬಳೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಶಿಕ್ಷಣ ಸಚಿವರು ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದ ವೇಳೆ ವೇದಿಕೆಯ ಸಮೀಪ ಗದ್ದಲ ನಡೆಸಿ, ಪ್ರವೇಶ ದ್ವಾರವನ್ನು ತಡೆದ ಆರೋಪದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಎಸ್‌ಐ ಕೆ.ಪಿ. ಗಣೇಶ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ, ಅಶ್ವಿನ್ ಅಜಿಕುಮಾರ್, ಪಿ.ಆರ್. ಸುನಿಲ್, ಸಂದೀಪ್, ವಿಕ್ರಂಪೈ ಸೇರಿದಂತೆ 10 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಶಿಕ್ಷಣ ಸಚಿವರ ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸಲಾಗಿದ್ದ ವೇದಿಕೆಯ ಪ್ರವೇಶ ದ್ವಾರದ ಗೇಟ್ ಬಳಿ ಕುಂಬಳೆ ಭಾಗದಿಂದ ಮೆರವಣಿಗೆಯಲ್ಲಿ ಬಂದ ಆರೋಪಿಗಳು ಪ್ರವೇಶಕ್ಕೆ ಅಡ್ಡಿಪಡಿಸಿದ್ದಾಗಿ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments