Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬಾಡೂರು ಶ್ರೀ ದುರ್ಗಾ ಯುವಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬಾಡೂರು : ಬಾಡೂರು ಶ್ರೀ ದುರ್ಗಾ ಯುವಕ ಸಂಘದ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಹಿರಿಯ ಕಾರ್ಯಕರ್ತರ ಉಪಸ್ಥಿತಿಯಲ್ಲಿ  ಕೆ.ಪಿ. ಅನಿಲ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವು 'ವಂದೇ ಮಾತರಂ' ಗೀತೆಯೊಂದಿಗೆ ಆರಂಭವಾಯಿತು. ಸ್ವಾತಂತ್ರ್ಯೋತ್ಸವದ ಮಹತ್ವ ಹಾಗೂ ದೇಶದ ಪ್ರಗತಿಯಲ್ಲಿ ಯುವಕರ ಪಾತ್ರದ ಕುರಿತು ಕಾರ್ಯಕ್ರಮದಲ್ಲಿ ಸಂದೇಶ ನೀಡಲಾಯಿತು. ಸಂಘದ ಪದಾಧಿಕಾರಿಗಳು, ಹಿರಿಯ ಕಾರ್ಯಕರ್ತರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಂಘದ ಸದಸ್ಯರಾದ ದೀಕ್ಷಿತ್ ರೈ ಸ್ವಾಗತಿಸಿದರು. ಕ್ರೀಡಾ ಕಾರ್ಯದರ್ಶಿ ಭರತ್ ಬಾಡೂರು ಧನ್ಯವಾದ ಸಲ್ಲಿಸಿ ಸಂಘದ ಅಧ್ಯಕ್ಷರಾದ ಅಬಿತ್ ಟಿ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ರಾಷ್ಟ್ರ ಗೀತೆಹಾಡಿ ಸಿಹಿ ತಿಂಡಿ ಹಂಚಲಾಯಿತು. 

Post a Comment

0 Comments

ಜಾಹೀರಾತು

Responsive Advertisement