Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬ್ರಹ್ಮಾವರದಲ್ಲಿ ದಂಪತಿ ಹತ್ಯೆ :ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ

ಬ್ರಹ್ಮಾವರ : ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರನೇ ಹೆತ್ತ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ.

ಗಾಂಧಿನಗರ ನಿವಾಸಿ ಲಾರಿ ಚಾಲಕರಾಗಿದ್ದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅವರ ಪುತ್ರ ಶಾಹಿದ್ ಅಲಿ ಹತ್ಯೆ ಆರೋಪಿಯಾಗಿದ್ದಾನೆ.

ಭಾನುವಾರ ರಾತ್ರಿ ಮನೆಯಲ್ಲಿ ತಂದೆ-ತಾಯಿಯೊಂದಿಗೆ ಜಗಳ ನಡೆದಿದ್ದು, ಈ ವೇಳೆ ಸಿಟ್ಟಿಗೆದ್ದ ಶಾಹಿದ್ ಅಲಿ ಸುತ್ತಿಗೆಯಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಆರೋಪಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ತಿಳಿದುಬಂದಿದ್ದು, ಬ್ರಹ್ಮಾವರ ಪೊಲೀಸರು ಶಾಹಿದ್ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement