Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾಸರಗೋಡು ನಿಕಟಪೂರ್ವ ಜಿಲ್ಲಾಧಿಕಾರಿ ಡಿ. ಸಜಿತ್ ಬಾಬು ಕೇರಳದ ಮುಖ್ಯ ಚುನಾವಣಾಧಿಕಾರಿಯಾಗಿ ನೇಮಕ

ತಿರುವನಂತಪುರ : ಕೇರಳದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ಡಿ. ಸಜಿತ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಶಿಫಾರಸು ಮಾಡಿದ್ದ ಮೂವರು ಅಧಿಕಾರಿಗಳ ಪಟ್ಟಿಯಿಂದ ಕೇಂದ್ರ ಚುನಾವಣಾ ಆಯೋಗವು ಸಜಿತ್ ಬಾಬು ಅವರ ಹೆಸರನ್ನು ಆಯ್ಕೆ ಮಾಡಿದೆ.

ಸಜಿತ್ ಬಾಬು ಅವರು ಪ್ರಸ್ತುತ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶೇಷ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ನೇಮಕಕ್ಕೆ ಕೇಂದ್ರ ಚುನಾವಣಾ ಆಯೋಗ ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರದ ಅಧಿಕೃತ ಆದೇಶ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.

ಹಿಂದಿನ ಮುಖ್ಯ ಚುನಾವಣಾಧಿಕಾರಿ ರತ್ತನ್ ಯು. ಖೇಲ್ಕರ್ ಅವರು ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಈ ಹುದ್ದೆ ತೆರವಾಗಿತ್ತು. ಬಳಿಕ ಎ. ಕೌಶಿಕ್ ಅವರನ್ನು ಸಿಇಒ ಆಗಿ ನೇಮಿಸಲಾಗಿತ್ತು. ಕೌಶಿಕ್ ಅವರು ಕೇಂದ್ರ ಡೆಪ್ಯುಟೇಷನ್‌ಗೆ ತೆರಳಿದ ಹಿನ್ನೆಲೆಯಲ್ಲಿ ಇದೀಗ ಸಜಿತ್ ಬಾಬು ಅವರನ್ನು ಹೊಸ ಮುಖ್ಯ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ಸಜಿತ್ ಬಾಬು ಅವರು ಈ ಹಿಂದೆ ಕಾಸರಗೋಡು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

Post a Comment

0 Comments

ಜಾಹೀರಾತು

Responsive Advertisement