Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕೋಟಿಕುಳಂ ರೈಲ್ವೆ ಮೇಲ್ಸೇತುವೆ ಯೋಜನೆಗೆ ಡಿಪಿಆರ್ ಅನುಮೋದನೆ : ಶೀಘ್ರದಲ್ಲೇ ಕಾಮಗಾರಿ ಆರಂಭ

ಕಾಸರಗೋಡು : ಕೋಟಿಕುಳಂ ರೈಲ್ವೆ ಮೇಲ್ಸೇತುವೆ ನಿರ್ಮಾಣದ ದಿಸೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮೇಲ್ಸೇತುವೆ ಯೋಜನೆಯ ವಿವರವಾದ ಯೋಜನಾ ವರದಿ (DPR)ಗೆ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ನಿರ್ಮಾಣ ಕಾಮಗಾರಿಗಳು ಆರಂಭವಾಗಲಿವೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ಅಶ್ವಿನಿ ಎಂ.ಎಲ್. ತಿಳಿಸಿದ್ದಾರೆ.

ದಶಕಗಳಿಂದ ಸ್ಥಳೀಯ ನಿವಾಸಿಗಳು ಎದುರಿಸುತ್ತಿರುವ ಪ್ರಯಾಣದ ತೊಂದರೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ್ದಾಗಿದೆ. ಡಿಪಿಆರ್‌ಗೆ ಅನುಮೋದನೆ ದೊರೆತಿರುವುದು ಯೋಜನೆ ಸಾಕಾರಗೊಳ್ಳುವತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.

ಕೋಟಿಕುಳಂ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕಾಗಿ ಮಧ್ಯಪ್ರವೇಶಿಸಲು ಸಾಧ್ಯವಾಗಿರುವುದು ಸಂತಸದ ಸಂಗತಿ ಎಂದು ಅಶ್ವಿನಿ ಎಂ.ಎಲ್. ತಿಳಿಸಿದ್ದಾರೆ.

ಯೋಜನೆಗೆ ಸಹಕಾರ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರಾಜ್ಯ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಪಿ.ಕೆ. ಕೃಷ್ಣದಾಸ್ ಅವರಿಗೆ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.


Post a Comment

0 Comments

ಜಾಹೀರಾತು

Responsive Advertisement