ಪೆರ್ಲ : ಜ್ವರದಿಂದ ಬಳಲುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಮನೆಯಲ್ಲಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಎಣ್ಮಕಜೆ ಪಂಚಾಯತ್ ವ್ಯಾಪ್ತಿಯ ಪಡ್ರೆ ಸಜಂಗದ್ದೆಯಲ್ಲಿ ನಡೆದಿದೆ. ಮೃತರನ್ನು ಪಡ್ರೆ ಸಜಂಗದ್ದೆಯ ಟೀಲು ನಾಯ್ಕ (58) ಎಂದು ಗುರುತಿಸಲಾಗಿದೆ. ಈ ಹಿಂದೆ ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಟೀಲು ನಾಯ್ಕ ಅವರಿಗೆ ಕಳೆದ ಕೆಲ ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ನಿನ್ನೆ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಬಳಿಕ ಔಷಧಿ ಪಡೆದು ಮನೆಗೆ ಮರಳಿದ್ದರು.
ನಿನ್ನೆ ಸಂಜೆ ಸುಮಾರು 3 ಗಂಟೆಯ ವೇಳೆಗೆ ಮನೆಯಲ್ಲಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ಮೃತರು ದಿ. ಈಶ್ವರ ನಾಯ್ಕ್ ಹಾಗೂ ಪಾರ್ವತಿ ದಂಪತಿಯ ಪುತ್ರ. ಪತ್ನಿ ಲಲಿತಾ, ಏಕೈಕ ಪುತ್ರ ಯೋಗೀಶ್, ಸೊಸೆ ಕೃತಿಕಾ ಹಾಗೂ ಸಹೋದರ ಗೋವಿಂದ ನಾಯಕ್ ಅವರನ್ನು ಅಗಲಿದ್ದಾರೆ.

0 Comments