Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಭರತನಾಟ್ಯ ಪರೀಕ್ಷೆಯಲ್ಲಿ ದೂರದರ್ಶನ ಬಿ-ಹೈ ಗ್ರೇಡ್ ಪಡೆದ ನೃತ್ಯವಿದುಷಿ ಅಯನಾ ಪೆರ್ಲ

ಮಂಗಳೂರು : ಪ್ರಸಿದ್ಧ ಭರತನಾಟ್ಯ ಕಲಾವಿದೆ ವಿದುಷಿ ಅಯನಾ ಪೆರ್ಲ ಅವರು ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ದೂರದರ್ಶನವು ಏರ್ಪಡಿಸುವ ಉನ್ನತ ಶ್ರೇಯಾಂಕದ ಭರತನಾಟ್ಯ ಪರೀಕ್ಷೆಯಲ್ಲಿ ಬಿ-ಹೈ ಸ್ಥಾನ ಪಡೆದಿದ್ದಾರೆ. ಇದೊಂದು ಪ್ರತಿಷ್ಠಿತ ಸ್ಥಾನವಾಗಿದ್ದು ಭಾರತದಾದ್ಯಂತ ಉನ್ನತ ಪ್ರದರ್ಶನಗಳನ್ನು ನೀಡಲು ಅರ್ಹತೆ ಪಡೆಯುವ ಮಾನದಂಡವಾಗಿದೆ.

ಕಳೆದ ಇಪ್ಪತ್ತೈದು ವರ್ಷಗಳಿಂದ ಭರತನಾಟ್ಯ ಕಲಿಯುತ್ತ ದೇಶಾದ್ಯಂತ ಪ್ರದರ್ಶನ ನೀಡುತ್ತಿರುವ ವಿದುಷಿ ಅಯನಾ ಪೆರ್ಲ ಮಂಗಳೂರಿನ ನೃತ್ಯವಿದುಷಿಯರಾದ ಶಾರದಾಮಣಿ ಶೇಖರ್ ಮತ್ತು ಶ್ರೀಲತಾ ನಾಗರಾಜ್ ಅವರ ಶಿಷ್ಯೆಯಾಗಿ, ಪ್ರಸ್ತುತ ಚೆನ್ನೈಯ ವರ್ಷಾ ಅಕ್ಹೌರಿ ಅವರ ಬಳಿ ಭರತನಾಟ್ಯದ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ.

ವಿದುಷಿ ಅಯನಾ ಪೆರ್ಲ ಕವಿ - ಸಾಹಿತಿ ದಂಪತಿಗಳಾದ ಡಾ. ವಸಂತಕುಮಾರ ಪೆರ್ಲ ಮತ್ತು ಕೆ. ಶೈಲಾಕುಮಾರಿ ಅವರ ದ್ವಿತೀಯ ಪುತ್ರಿಯಾಗಿದ್ದು ಯೋಗ ಪರಿಣಿತೆಯೂ ಆಗಿದ್ದಾರೆ. ಎಂಜಿನಿಯರಿಂಗ್ ಶಿಕ್ಷಣ ಪಡೆದು ಸದ್ಯ ಚೀನಾದಲ್ಲಿ ವೃತ್ತಿಯಲ್ಲಿದ್ದಾರೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost


Post a Comment

0 Comments

ಜಾಹೀರಾತು

Responsive Advertisement