Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಭಾವಿ ವರ ಬೈಕ್ ಅಪಘಾತದಲ್ಲಿ ಮೃತಪಟ್ಟ ಬಳಿಕ ವಧುವಿನ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ


ಎರ್ನಾಕುಳಂ : ಭಾವಿ ವರ ಬೈಕ್ ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಭಾವಿವಧು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

 ಇಂಚೂರು ಕೋಟಕ್ಕುಡಿ ನಿವಾಸಿ ಹನ್ನಾ (23) ಮೃತ ಯುವತಿ ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನ 3ರ ಸುಮಾರಿಗೆ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.

ಮಂಗಳವಾರ ರಾತ್ರಿ ಕವಳಂಗಾಡ್ ತಾಲ್ಲೂಕು ಆಸ್ಪತ್ರೆ ಸಮೀಪ ನಡೆದ ಬೈಕ್ ಅಪಘಾತದಲ್ಲಿ ಹನ್ನಾ ಅವರ ಭಾವಿ ವರ  ಗೊಮೇಂತಪ್ಪಡಿ ಕುರಿಶಿಂಕರ ಆಂಟಣಿ ಮೃತಪಟ್ಟಿದ್ದರು. ಇಬ್ಬರ ವಿವಾಹ ನಿಶ್ಚಯವಾಗಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ. ಬುಧವಾರ ಆಂಟಣಿ ಅವರ ಅಂತ್ಯಕ್ರಿಯೆ ನಡೆದಿತ್ತು.

ಭಾವಿ ವರನ ಅಗಲಿಕೆಯ ದುಃಖದಲ್ಲಿದ್ದ ಹನ್ನಾ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ. ಯುವತಿ ಕೋತಮಂಗಲಂ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.

Post a Comment

0 Comments

ಜಾಹೀರಾತು

Responsive Advertisement