ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 21 ಬಾಂಗ್ಲಾದೇಶಿ ಪ್ರಜೆಗಳನ್ನು ಗಡೀಪಾರು ಮಾಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಶದಲ್ಲಿರುವವರನ್ನು ಪಶ್ಚಿಮ ಬಂಗಾಳದ ಮಾಲ್ಡಾಗೆ ಕರೆದೊಯ್ದು, ಅಲ್ಲಿನ ಗಡಿ ಭದ್ರತಾ ಪಡೆ (ಬಿ ಎಸ್ ಎಫ್ ) ಅಧಿಕಾರಿಗಳಿಗೆ ಹಸ್ತಾಂತರಿಸಲು 30 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡ ಮಂಗಳೂರಿನಿಂದ ತೆರಳಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದು, 21 ಮಂದಿಯನ್ನು ಬಿಗಿ ಭದ್ರತೆಯಲ್ಲಿ ಬಸ್ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಆಗಸ್ಟ್ 23ರಂದು ಬೆಂಗಳೂರಿನಿಂದ ರೈಲಿನಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ಪ್ರಯಾಣಿಸಲಿದ್ದಾರೆ. ಮಾಲ್ಡಾ ತಲುಪಿದ ಬಳಿಕ ಅವರನ್ನು ಬಿ ಎಸ್ ಎಫ್ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಲಾಗುವುದು. ಬಳಿಕ ಕಾನೂನುಬದ್ಧ ಗಡೀಪಾರು ಪ್ರಕ್ರಿಯೆಯನ್ನು ಬಿ ಎಸ್ ಎಫ್ ಪೂರ್ಣಗೊಳಿಸಲಿದೆ. ಸಂಪೂರ್ಣ ಕಾರ್ಯಾಚರಣೆಯನ್ನು ಆಗಸ್ಟ್ 26ರೊಳಗೆ ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿದೆ.
.jpeg)
0 Comments