ಕುಂಬಳೆ: ರಾಷ್ಟ್ರ ಸ್ವಾಭಿಮಾನ ಸಮಿತಿಯ ವತಿಯಿಂದ ಕುಂಬಳೆಯಲ್ಲಿ ಜಿಲ್ಲಾ ಮಟ್ಟದ ತಿರಂಗಾ ಯಾತ್ರೆ ನಡೆಸಲಾಯಿತು. ತಿರಂಗಾ ಯಾತ್ರೆಯನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ. ಕೃಷ್ಣದಾಸ್ ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯರಾದ ವಿ. ರವೀಂದ್ರನ್, ಸತೀಶ್ ಚಂದ್ರ ಭಂಡಾರಿ, ಅಡ್ವ. ಬಾಲಕೃಷ್ಣ ಶೆಟ್ಟಿ, ರಾಮಪ್ಪ ಮಂಜೇಶ್ವರ, ಎ. ಪ್ರಮೀಳಾ ಸಿ. ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಎನ್. ಬಾಬುರಾಜ್, ಜಿಲ್ಲಾ ಉಪಾಧ್ಯಕ್ಷರಾದ ಪಿ. ರಮೇಶ್, ಮುರಳೀಧರ ಯಾದವ್ ಹಾಗೂ ಕುಂಬಳೆ ಮಂಡಲ ಸಮಿತಿ ಅಧ್ಯಕ್ಷ ವಿಕ್ರಂ ಪೈ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಕುಂಬಳೆ ಹೋಲಿ ಫ್ಯಾಮಿಲಿ ವಿದ್ಯಾಲಯದ ಆವರಣದಿಂದ ತಿರಂಗಾ ಯಾತ್ರೆ ಆರಂಭಗೊಂಡಿದ್ದು, ನೂರಾರು ಮಂದಿ ತ್ರಿವರ್ಣ ಧ್ವಜಗಳನ್ನು ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡರು.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost


0 Comments