Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾಸರಗೋಡಿನಲ್ಲಿ ಸಂಭ್ರಮದ ಓಣಂ ಆಚರಣೆಗೆ ಚಾಲನೆ : ಸ್ನೇಹಪರ ಹಗ್ಗಜಗ್ಗಾಟದಲ್ಲಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್

ಕಾಸರಗೋಡು : ಸಂತೋಷ ಮತ್ತು ಸಮಾನತೆಯ ಸಂದೇಶ ಸಾರುವ ಓಣಂ ಆಚರಣೆಗೆ ಜಿಲ್ಲೆಯಲ್ಲಿ ಸಂಭ್ರಮದ ಚಾಲನೆ ದೊರೆಯಿತು. ಜಿಲ್ಲಾ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ‘ಒಪ್ಪಂ ಇರುನ್ನ್ ಓಣಂ' ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಕಲೆಕ್ಟರ್ ಅರ್ಜುನ್ ಪಾಂಡ್ಯನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ನಿತಿನ್ ರಾಜ್ ನೇತೃತ್ವದಲ್ಲಿ ನಡೆದ ಸ್ನೇಹಪರ ಹಗ್ಗಜಗ್ಗಾಟ ಸ್ಪರ್ಧೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.

ಜಿಲ್ಲಾ ಪೊಲೀಸ್ ಕೇಂದ್ರ ಕಚೇರಿಯಲ್ಲಿ ನಡೆದ ಓಣಂ ಆಚರಣೆಯನ್ನು ಜಿಲ್ಲಾಧಿಕಾರಿ ಉದ್ಘಾಟಿಸಿದರು. ಓಣಂ ಆಚರಣೆಯಲ್ಲಿ ಪೊಲೀಸರು ಕೂಡ ಸಕ್ರಿಯವಾಗಿ ಭಾಗವಹಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು.

Post a Comment

0 Comments

ಜಾಹೀರಾತು

Responsive Advertisement