Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಇವಿ ಬೈಕ್‌ಗಳ ಪಾರ್ಕಿಂಗ್‌ ಸ್ಥಳದಲ್ಲಿ ಬೆಂಕಿ; 400ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಗಳೂರು : ಕೆ.ಆರ್. ಪುರದ ಎನ್‌ಆರ್‌ಐ ಲೇಔಟ್‌ನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 400ಕ್ಕೂ ಹೆಚ್ಚು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಝೆಪ್ಟೋ, ಸ್ವಿಗ್ಗಿ ಹಾಗೂ ಝೊಮ್ಯಾಟೊ ಡೆಲಿವರಿ ಸಿಬ್ಬಂದಿಗೆ ಬಾಡಿಗೆಗೆ ನೀಡಲಾಗುತ್ತಿದ್ದ ವಾಹನಗಳನ್ನು ಇಲ್ಲಿ ಪಾರ್ಕ್ ಮಾಡಲಾಗಿತ್ತು.

ಸಂಜೆ ಸುಮಾರು 7 ಗಂಟೆ ವೇಳೆಗೆ ಆವರಣದ ಗೇಟ್‌ನ್ನು ಲಾಕ್ ಮಾಡಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪಾರ್ಕಿಂಗ್ ಹಾಗೂ ಸರ್ವೀಸ್‌ಗಾಗಿ ಇರಿಸಲಾಗಿದ್ದ ವಾಹನಗಳಿಗೆ ಬೆಂಕಿ ವೇಗವಾಗಿ ವ್ಯಾಪಿಸಿದೆ.

ಇದು ಯಾರೋ ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯವಾಗಿರಬಹುದು ಎಂಬ ಶಂಕೆಯನ್ನು ವಾಹನ ನಿರ್ವಹಣಾ ಸಂಸ್ಥೆಯ ಸಿಬ್ಬಂದಿ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.



ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement