Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸೆ. 6ರಂದು ಕೊಂಡೆವೂರು ಮಠದಲ್ಲಿ ‘ಜೆನ್ - ಝೀ ಯುವ ಸಂವಾದ’

ಉಪ್ಪಳ : ಸೆ. 6ರಂದು ಯುವಜನರಲ್ಲಿ ಸಾಮಾಜಿಕ ಜಾಗೃತಿ, ದೇಶಾಭಿಮಾನ ಹಾಗೂ ಜವಾಬ್ದಾರಿಯುತ ನಾಗರಿಕ ಪ್ರಜ್ಞೆ ಬೆಳೆಸುವ ಉದ್ದೇಶದಿಂದ ಉಪ್ಪಳ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ‘ಜೆನ್ - ಝೀ ಯುವ ಸಂವಾದ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಜೆನ್ - ಝೀ ಪೀಳಿಗೆಯ ಯುವಕ-ಯುವತಿಯರೊಂದಿಗೆ ಸಮಕಾಲೀನ ವಿಚಾರಗಳ ಕುರಿತು ಸಂವಾದ ನಡೆಯಲಿದೆ.

ಸಾಮಾಜಿಕ ಮಾಧ್ಯಮಗಳ ಪ್ರಭಾವ, ‘ಟ್ರೆಂಡಿಂಗ್ & ವೈರಲ್' ವಿಷಯಗಳ ಹಿಂದಿನ ವಾಸ್ತವ, ಯುವಕರ ಆತ್ಮವಿಶ್ವಾಸ, ಸಾಮಾಜಿಕ ಜವಾಬ್ದಾರಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಉದ್ಯಮಿ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕೋಶಾಧಿಕಾರಿ ಹರಿಪ್ರಸಾದ್ ರೈ ಪುತ್ರಕಳ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಚಿಂತಕ ಹಾಗೂ ವಾಗ್ಮಿ, ಪವನ್ ಕಿರಣಕೇರೆ ಅವರು ಮುಖ್ಯ ವಕ್ತಾರರಾಗಿ ಭಾಗವಹಿಸಿ ಯುವಕರಿಗೆ ಮಾರ್ಗದರ್ಶನ ಹಾಗೂ ಪ್ರೇರಣಾದಾಯಕ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ‘ವಂದೇ ಮಾತರಂ’ ಸಾಮೂಹಿಕ ಗಾಯನ ನಡೆಯಲಿದೆ. ಯುವಕರ ಪ್ರಶ್ನೆಗಳು, ಆಲೋಚನೆಗಳು ಹಾಗೂ ಅಭಿಪ್ರಾಯಗಳಿಗೆ ಮುಕ್ತ ವೇದಿಕೆ ಕಲ್ಪಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement