Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಗಾಳಿ ಮಳೆಗೆ ಕುಂಬ್ಡಾಜೆಯಲ್ಲಿ ಮನೆ ಕುಸಿತ : ಪಂ.ಪ್ರತಿನಿಧಿಗಳ ಭೇಟಿ

ಬದಿಯಡ್ಕ : ಕುಂಬ್ಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊಡಿಪ್ಪಳದಲ್ಲಿ ಕಳೆದ ದಿನ ಸುರಿದ ಭಾರೀ ಗಾಳಿ ಮಳೆಗೆ ಯೋಗೀಶ್ ಎಂಬವರ ಮನೆ ಭಾಗಶಃ ಕುಸಿದು ಬಿದ್ದಿದೆ. ಬುಧವಾರ ಘಟನೆ ನಡೆದಿದ್ದು, ಮನೆಯ ಹಂಚು ಹಾಸಿದ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಮನೆ ಕುಸಿತದಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

ಘಟನೆಯ ಬಳಿಕ ಕುಂಬ್ಡಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಾ ಎನ್., ಪಂಚಾಯಿತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರಿಯಾಂಕ ಎ.ಸಿ., ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಕಾರ್ಯದರ್ಶಿ ಪ್ರಮೋದ್ ಭಂಡಾರಿ, ಸುರೇಶ್ ಹಾಗೂ ಭಾಸ್ಕರ ಪೊಡಿಪ್ಪಳ ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Post a Comment

0 Comments

ಜಾಹೀರಾತು

Responsive Advertisement