ಪೆರ್ಲ : ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜು, ಪೆರ್ಲದಲ್ಲಿ “ಕನಕದಾಸರ ಸಾಹಿತ್ಯದಲ್ಲಿ ಸಾಮಾಜಿಕ ಪರಿವರ್ತನೆ” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ನೆರವೇರಿಸಿ "ಕನಕದಾಸರ ಸಾಹಿತ್ಯದಲ್ಲಿ ಸಾಮಾಜಿಕ ಬದ್ಧತೆ, ಸಮಾಜದ ಪರಿವರ್ತನೆಗೆ ಒತ್ತು ಹಾಗೂ ಕನಕದಾಸರ ಸಾಹಿತ್ಯ ಪರಂಪರೆಯ ಮಹತ್ವ ಮತ್ತು ಕನಕದಾಸರ ಸಾಹಿತ್ಯವು ಕೇವಲ ಮನರಂಜನೆಯ ಮಾಧ್ಯಮವಲ್ಲದೆ, ಸಮಾಜದ ಅಸಮಾನತೆ, ಶೋಷಣೆ ಮತ್ತು ಅನ್ಯಾಯಗಳ ವಿರುದ್ಧ ಜಾಗೃತಿ ಮೂಡಿಸುವ ಪ್ರಬಲ ಸಾಧನವಾಗಿದೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎ ಮೋಹನ ಕುಂಟಾರು ವಹಿಸಿದ್ದರು. ಕನಕದಾಸ ಸಂಶೋಧನಾ ಕೇಂದ್ರದ ಸಂಯೋಜಕ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಧನಂಜಯ ಕುಂಬಳೆ ಆಶಯನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ನಾಲಂದ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಸತೀಶ್ಚಂದ್ರ ಭಂಡಾರಿ ಕೋಳಾರು ಉಪಸ್ಥಿತರಿದ್ದರು.
ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ವಿವಿಧ ಗೋಷ್ಠಿಗಳು ಹಾಗೂ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಅಧ್ಯಾಪಕರು, ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಸಾಹಿತ್ಯಾಸಕ್ತರು ಭಾಗವಹಿಸಿದ್ದರು. ಕಾರ್ಯಕ್ರಮವು ಕನಕದಾಸರ ಸಾಹಿತ್ಯದ ಸಾಮಾಜಿಕ ಆಯಾಮಗಳ ಕುರಿತು ಚಿಂತನೆ ಮತ್ತು ಚರ್ಚೆಗೆ ಉತ್ತಮ ವೇದಿಕೆಯಾಯಿತು.
ನಾಲಂದ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥೆ ಅನುಪಮ ಪಿ ಕಾರ್ಯಕ್ರಮವನ್ನು ನಿರೂಪಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ವರ್ಷಿತ್.ಕೆ ನೆರೆದವರನ್ನು ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಶ್ವಿನಿ ಧನ್ಯವಾದ ಸಮರ್ಪಿಸಿದರು.
.jpeg)

0 Comments