ಬದಿಯಡ್ಕ : ಕುಂಬ್ಡಾಜೆ ಗ್ರಾಮ ಪಂಚಾಯತಿನಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಇದರಂಗವಾಗಿ ನಡೆದ ಧ್ವಜಾರೋಹಣವನ್ನು ಕುಂಬ್ಡಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಾ ಎನ್. ನಿರ್ವಹಿಸಿ ಮಾತನಾಡಿದರು. ನಟರಾಜ ಶರ್ಮಾ ಅವರು ಸಂಪೂರ್ಣ 'ವಂದೇ ಮಾತರಂ'ನ್ನು ಹಾಡಿದರು.
ಈ ಸಂದರ್ಭದಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಅಭಿವೃದ್ಧಿ ಯೋಜನೆಗಳು ಮತ್ತು ಸಮುದಾಯ ಕಲ್ಯಾಣ ವಿಷಯಗಳ ಕುರಿತು ಚರ್ಚೆ ನಡೆಯಿತು. ಸಾರ್ವಜನಿಕರೊಂದಿಗೆ ಸಂವಾದ ಹಾಗೂ ಮುಂಬರುವ ಸ್ಥಳೀಯಾಡಳಿತ ಯೋಜನೆಗಳ ಬಗ್ಗೆಯೂ ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ನಯನ, ಪಂಚಾಯಿತಿ ಕಲ್ಯಾಣ ಸ್ಥಾಯಿ ಸಮಿತಿ ಸಮಿತಿ ಅಧ್ಯಕ್ಷ ಅಬೂಬಕರ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರಿಯಾಂಕ ಎ.ಸಿ., ಪಂಚಾಯಿತಿ ಸದಸ್ಯರಾದ ಸೌಭಾಗ್ಯಲಕ್ಷ್ಮೀ, ಕೊರಗಪ್ಪ ಬೆಳ್ಳಿಗೆ, ಮಹೇಶ್ ಅಜ್ಜಿಮೂಲೆ, ಎಸ್.ಮೊಹಮ್ಮದ್ ಕುಂಞಿ, ಬಿ.ಟಿ.ಅಬ್ದುಲ್ಲ ಕುಂಞಿ, ಗೀತಾ ಡಿ., ಬಬಿತಾ ರೇಶ್ಮಾ ಮುಂತಾದವರು ಶುಭಾಶಂಸನೆಗೈದರು. ಕಾರ್ಯಕ್ರಮದಲ್ಲಿ ಪಂಚಾಯತಿನ ಸಿಬ್ಬಂದಿಗಳು ಭಾಗವಹಿಸಿದರು.

0 Comments