ನಾರಂಪಾಡಿ : ಶಿವಗಿರಿ ಫ್ರೆಂಡ್ಸ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್, ಶಿವಗಿರಿ ನಗರ, ನಾರಂಪಾಡಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ಅಧ್ಯಕ್ಷ ಬಾಲಕೃಷ್ಣ ಮಾಸ್ಟರ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ದೇಶಭಕ್ತಿ ಹಾಗೂ ಗೌರವದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

0 Comments