Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

‘ಕಿಂಗ್ಸ್ ಬಜಾರ್’ ಹೆಸರಿನಲ್ಲಿ ನಿಷೇಧಿತ ಮನಿ ಸರ್ಕ್ಯುಲೇಷನ್ ಸ್ಕೀಮ್ ನಲ್ಲಿ ಹಣ ಹೂಡಿಕೆ ದಂಧೆ : ಎಂಟು ಮಂದಿ ವಿರುದ್ಧ ಕೇಸು : ತೀವ್ರ ತನಿಖೆ ಆರಂಭ

ಕಡಬ : ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರನ್ನು ಸೇರಿಸಿ ‘ಕಿಂಗ್ಸ್ ಬಜಾರ್’ ಹೆಸರಿನಲ್ಲಿ ನಿಷೇಧಿತ ಹಣ ಪರಿಚಲನಾ ಯೋಜನೆಯ ಮೂಲಕ ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮಾಲಕರು ಹಾಗೂ ಸ್ಥಳೀಯ ಏಜೆಂಟರು ಸೇರಿದಂತೆ ಎಂಟು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಆಗಸ್ಟ್ 23ರಂದು ದೊರೆತ ಗುಪ್ತ ಮಾಹಿತಿಯ ಮೇರೆಗೆ ಪೊಲೀಸರು ಅಂಬೇಡ್ಕರ್ ಭವನಕ್ಕೆ ತೆರಳಿ ಪರಿಶೀಲಿಸಿದಾಗ, ಸದಸ್ಯತ್ವ ಪಡೆದು ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ, ರಿಯಾಯಿತಿ ದರದಲ್ಲಿ ವಸ್ತುಗಳು ಹಾಗೂ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಿದರೆ ಕಮಿಷನ್ ನೀಡುವುದಾಗಿ ಆಮಿಷವೊಡ್ಡಿ ಹಣ ಸಂಗ್ರಹಿಸುತ್ತಿರುವುದು ಪತ್ತೆಯಾಗಿದೆ.

ಪ್ರಕರಣದಲ್ಲಿ ಕಿಂಗ್ಸ್ ಬಜಾರ್ ಸಂಸ್ಥೆಯ ಮಾಲಕರು ಹಾಗೂ ಸ್ಥಳೀಯ ಏಜೆಂಟರು ಸೇರಿದಂತೆ ಎಂಟು ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಹೆಚ್ಚಿನ ಲಾಭದ ಆಮಿಷವೊಡ್ಡಿ ಅಕ್ರಮವಾಗಿ ಹಣ ಸಂಗ್ರಹಿಸಿದ ಆರೋಪದಡಿ  ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣಾಧಿಕಾರಿ ಜಂಬುರಾಜ್ ಮಹಾಜನ್ ಅವರ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

Post a Comment

0 Comments

ಜಾಹೀರಾತು

Responsive Advertisement