Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಪೆರ್ಲದಲ್ಲಿ ಮಟ್ಕಾ ಜೂಜಾಟ : 1,560ರೂ. ಸಹಿತ ಓರ್ವನ ಬಂಧನ

ಬದಿಯಡ್ಕ : ಪೆರ್ಲದಲ್ಲಿ ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪೊಲೀಸರನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾಗಿ ತಿಳಿದು ಬಂದಿದೆ.

ಪೆರ್ಲ ನಲ್ಕ ವಿನಯ್ ಕುಮಾರ್ (32) ಬಂಧಿತ ವ್ಯಕ್ತಿ. ಪೆರ್ಲದಲ್ಲಿ ಮಟ್ಕಾ ಜೂಜಾಟ ವ್ಯಾಪಕವಾಗಿ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಬದಿಯಡ್ಕ ಎಸ್‌ಐ ಸುನಿಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ದಾಳಿ ವೇಳೆ ವಿನಯ್ ಕುಮಾರ್‌ನಿಂದ 1,560 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಪೊಲೀಸರನ್ನು ಕಂಡ ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement