Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕರ್ನಾಟಕದ ಹೋಟೆಲ್‌ ಹಾಗೂ ಮೆಡಿಕಲ್ ಗಳಲ್ಲಿ ಗ್ರಾಹಕರಿಗೆ ದೂರು ನೀಡಲು ಕ್ಯೂಆರ್ ಕೋಡ್ ಅಳವಡಿಸಲು ಸಚಿವರ ಆದೇಶ

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆಯಿಂದ ದಿಢೀರ್ ದಾಳಿ ನಡೆದ ಬೆನ್ನಲ್ಲೇ, ಹೋಟೆಲ್‌ಗಳಲ್ಲಿ ಸಿಸಿಟಿವಿ ಹಾಗೂ ಗ್ರಾಹಕರು ದೂರು ನೀಡಲು ಕ್ಯೂಆರ್ ಕೋಡ್ ಸ್ಕ್ಯಾನ್ ಅಳವಡಿಸಲಾಗುವುದು ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಹೋಟೆಲ್ ಆಹಾರ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮುಂದಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿನ್ನೆಯವರೆಗೂ 60ಕ್ಕೂ ಹೆಚ್ಚು 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್‌ಗಳು, 8 ಗೋಡೌನ್‌ಗಳು ಹಾಗೂ 4 ಎಂಟರ್‌ಪ್ರೈಸ್ ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ನೂರಾರು ಕೆಜಿ ಆಹಾರ ಪದಾರ್ಥ ವಶಪಡಿಸಿಕೊಂಡಿದ್ದು, ತಪಾಸಣೆ ವೇಳೆ ಅವಧಿ ಮೀರಿದ, ತಪ್ಪು ಲೇಬಲ್ ಹೊಂದಿರುವ ಹಾಗೂ ಅಸಮರ್ಪಕವಾಗಿ ಸಂಗ್ರಹಿಸಿದ್ದ ಹಲವು ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ಮಾಲೀಕರಿಗೆ ಸೂಚನೆ ನೀಡುವ ಜೊತೆಗೆ ಹೋಟೆಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ ಇನ್ನು  ಕ್ಯೂಆರ್ ಕೋಡ್ ಅಳವಡಿಸಲಾಗುವುದು ಎಂದು ಆರೋಗ್ಯ ಸಚಿವರು ಮಹತ್ವದ ಘೋಷಣೆ ಮಾಡಿದ್ದಾರೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಹಾರ ಗುಣಮಟ್ಟ, ಸೇವೆ ಅಥವಾ ಇತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement