ಕಾಸರಗೋಡು : ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಟೋದಲ್ಲಿ ಮನೆಗೆ ಮರಳುತ್ತಿದ್ದ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಟೋ ಚಾಲಕನನ್ನು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಶಾಜಿ ಎಂಬಾತನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಚಿಮೇನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಓಣಂ ಕಾರ್ಯಕ್ರಮದಲ್ಲಿ ಬಾಲಕಿ ಭಾಗವಹಿಸಿದ್ದಳು. ರಾತ್ರಿ ಆಟೋದಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಆಟೋದಲ್ಲೇ ಬಾಲಕಿಗೆ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮನೆಗೆ ತಲುಪಿದ ಬಳಿಕ ಬಾಲಕಿಯ ದೈಹಿಕ ಸ್ಥಿತಿಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಮನೆಯವರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

0 Comments