Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳಿಂದ ನೇಜಿದ ಗೌಜಿ

ಪೈವಳಿಕೆ : ಧರ್ಮತ್ತಡ್ಕ ಎಸ್‌ಡಿಪಿ ಹೈಯರ್ ಸೆಕೆಂಡರಿ ಶಾಲೆಯ ಎನ್‌ಎಸ್‌ಎಸ್ ಘಟಕದ ವತಿಯಿಂದ ಹೇರೂರು ಗ್ರಾಮದಲ್ಲಿ ನೇಜಿ ನೆಡುವ ಕಾರ್ಯಕ್ರಮ ಆಯೋಜಿಸಲಾಯಿತು. ವಿದ್ಯಾರ್ಥಿಗಳು ಸ್ಥಳೀಯ ಕೃಷಿಕರಾದ ಉಮೇಶ್ ಪೂಜಾರಿ ಅವರ ಗದ್ದೆಯಲ್ಲಿ ನೇಜಿ ನೆಡುವ ಕಾರ್ಯದಲ್ಲಿ ಪಾಲ್ಗೊಂಡು ಕೃಷಿ ಚಟುವಟಿಕೆಗಳ ಕುರಿತು ಪ್ರಾಯೋಗಿಕ ಅನುಭವ ಪಡೆದರು.

ಈ ಸಂದರ್ಭದಲ್ಲಿ ಸ್ಥಳೀಯ ಕೃಷಿಕರಾದ ಮುರಳೀಧರ ಮಯ್ಯ ಹಾಗೂ ಕಮಲ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಳುಮೆ ಕಾರ್ಯದಲ್ಲಿ ಭಾಗವಹಿಸಿ, ನೇಜಿ ನೆಟ್ಟು, ಜನಪದ ಗೀತೆಗಳನ್ನು ಹಾಡುವ ಮೂಲಕ ಸಂಭ್ರಮಿಸಿದರು.

ಕಾರ್ಯಕ್ರಮಕ್ಕೆ ಶಾಲೆಯ ಪ್ರಾಂಶುಪಾಲ ಸತೀಶ್ ಕುಮಾರ್ ಶೆಟ್ಟಿ ಒಡ್ಡಂಬೆಟ್ಟು, ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ನಿವೇದಿತಾ, ನಾಗರಾಜ್, ಶ್ವೇತಾ ನೇತೃತ್ವ ವಹಿಸಿದ್ದರು. ಶಿಕ್ಷಕಿ ಸ್ನೇಹಾ ಹಾಗೂ ಲತಾ ಬಾಯಾಡಿ ಸಹಕರಿಸಿದರು.

Post a Comment

0 Comments

ಜಾಹೀರಾತು

Responsive Advertisement