Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ನೆಕ್ರಾಜೆ ಶಿವಾಜಿನಗರದಲ್ಲಿ ಸಡಗರದ ಓಣಂ ಆಚರಣೆ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೆಕ್ರಾಜೆ : ಶ್ರೀ ಗೋಪಾಲಕೃಷ್ಣ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್, ಶಿವಾಜಿನಗರ, ನೆಕ್ರಾಜೆ ಇದರ ವತಿಯಿಂದ ಓಣಂ ಹಬ್ಬದ ಆಚರಣೆಯು ಅತ್ಯಂತ ಸಡಗರ ಸಂಭ್ರಮದಿಂದ ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರು ಹಾಗೂ ಊರಿನ ಬಂಧು-ಮಿತ್ರರಿಗಾಗಿ ಸಾಂಪ್ರದಾಯಿಕ ರುಚಿಕರವಾದ ‘ಓಣಂ ಸದ್ಯ’ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು. ತದನಂತರ ಊರಿನ ಯುವಕ-ಯುವತಿಯರು, ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಆಕರ್ಷಕ ಕ್ರೀಡಾಕೂಟಗಳು ಮತ್ತು ಮನರಂಜನಾ ಸ್ಪರ್ಧೆಗಳು ನಡೆದವು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಪಡೆದು ಉತ್ತೀರ್ಣರಾದ ಊರಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ಲಬ್‌ನ ವತಿಯಿಂದ ಸ್ಮರಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಸಂಭ್ರಮದ ಈ ಕಾರ್ಯಕ್ರಮದಲ್ಲಿ ಕ್ಲಬ್‌ನ ಅಧ್ಯಕ್ಷರು, ಪದಾಧಿಕಾರಿಗಳು, ಊರಿನ ಹಿರಿಯರು, ಮಹಿಳೆಯರು ಹಾಗೂ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Post a Comment

0 Comments

ಜಾಹೀರಾತು

Responsive Advertisement