Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಇಬ್ಬರು ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು–ಲಾಂಕೋ ಟೋಲ್ ಗೇಟ್ ಸಮೀಪ ನಡೆದಿದೆ.

‘ಸುಗಮ ಟ್ರಾವೆಲ್ಸ್’ಗೆ ಸೇರಿದ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬೆಂಗಳೂರಿನ ಕಸ್ತೂರಿ ಶಾನ್‌ಭಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಮೃತಪಟ್ಟಿದ್ದಾರೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಅತಿವೇಗದಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯ ಕುರಿತು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement