ಬಳ್ಳಾರಿ : ಮಂತ್ರಾಲಯಕ್ಕೆ ತೆರಳಿ ವಾಪಸ್ ಮಂಗಳೂರಿಗೆ ಬರುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಆಗಸ್ಟ್ 10ರ ರಾತ್ರಿ ನಡೆದಿದೆ.
ಮೃತರನ್ನು ಪುತ್ತೂರಿನ ಬೆಳಿಯೂರುಕಟ್ಟೆ ಮೂಲದ, ಸದ್ಯ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಆಗಸ್ಟ್ 9ರಂದು ಮಂಗಳೂರಿನಿಂದ ಬಸ್ ಮೂಲಕ ಮಂತ್ರಾಲಯಕ್ಕೆ ತೆರಳಿದ್ದ ಅವರು ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದರು.
ಆಗಸ್ಟ್ 10ರ ರಾತ್ರಿ ಬಸ್ ಬಳ್ಳಾರಿಯ ಎಪಿಎಂಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಸುಮಾರು 2.30ಕ್ಕೆ ಸಂದೀಪ್ ಶೆಟ್ಟಿ ಬಸ್‌ನಿಂದ ಇಳಿದು ನಿಲ್ದಾಣದಲ್ಲಿ ಕುಳಿತಿದ್ದರು. ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಗಮನಕ್ಕೆ ಬಂದ ಸಹ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಬಸ್ ನಿಲ್ದಾಣದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಬಳಿಕ ಮೃತರ ಪುತ್ರನಿಗೆ ಮಾಹಿತಿ ನೀಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments