Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕರ್ನಾಟಕದಲ್ಲಿ 15,000 ಸರ್ಕಾರಿ ಶಿಕ್ಷಕರ ನೇಮಕಾತಿ : ಅರ್ಜಿ ಆಹ್ವಾನ

 

ಬೆಂಗಳೂರು : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 15,000 ಶಿಕ್ಷಕರ ನೇಮಕಾತಿಗೆ ಪ್ರಕ್ರಿಯೆ ಆರಂಭಗೊಂಡಿದ್ದು, ಆಗಸ್ಟ್ 18ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಸೆಪ್ಟೆಂಬರ್ 7ರವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿರುವ ಅಧಿಸೂಚನೆಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ನಡೆಯಲಿದೆ.

ಅರ್ಹತೆ ಹೊಂದಿರುವ ಭಾರತೀಯ ನಾಗರಿಕರು ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಸ್ಥಳೀಯ ಮೀಸಲಾತಿಯ ಪ್ರಯೋಜನ ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗಲಿದೆ. ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿರುತ್ತದೆ.

ಹುದ್ದೆಗೆ ಅನುಗುಣವಾಗಿ ಪದವಿ, ಬಿ.ಇಡ್./ಡಿ.ಎಲ್.ಎಡ್ ಹಾಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET/CTET) ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ 21ರಿಂದ 40 ವರ್ಷವರೆಗೆ ಇದ್ದು, ನಿಯಮಾನುಸಾರ ವಯೋಮಿತಿ ಸಡಿಲಿಕೆ ಲಭ್ಯವಿದೆ.

ಹೊಸ ನೇಮಕಾತಿ ನಿಯಮ  2026ರ ಅನ್ವಯ ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ (CET) ಅಂಕಗಳಿಗೆ 70% ವೇಯಿಟೇಜ್ ನೀಡಲಾಗುತ್ತದೆ. ಉಳಿದ ಅಂಕಗಳನ್ನು 'ಟೆಟ್' ಹಾಗೂ ಶೈಕ್ಷಣಿಕ ಅರ್ಹತೆಯ ಅಂಕಗಳ ಆಧಾರದ ಮೇಲೆ ಪರಿಗಣಿಸಲಾಗುತ್ತದೆ.

ಕರ್ನಾಟಕದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಾವು ಆಯ್ಕೆ ಮಾಡುತ್ತಿರುವ ಜಿಲ್ಲೆ ಹಾಗೂ ಹುದ್ದೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಪರಿಶೀಲಿಸುವಂತೆ ಇಲಾಖೆ ಸೂಚಿಸಿದೆ.

ಅರ್ಜಿ ಮತ್ತು ಹೆಚ್ಚಿನ ಮಾಹಿತಿಗಾಗಿ schooleducation.kar.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಸೂಚಿಸಲಾಗಿದೆ.

Post a Comment

0 Comments

ಜಾಹೀರಾತು

Responsive Advertisement