ಕಾಸರಗೋಡು : "ಕಾಸರಗೋಡಿನ ಕನ್ನಡ ವಿದ್ಯಾರ್ಥಿಗಳು ಸೃಜನಶೀಲ ಬರೆವಣಿಗೆಗಳ ಮೂಲಕ ಕನ್ನಡದ ಅಸ್ಮಿತೆಯನ್ನು ಉಳಿಸುವುದು ಅಗತ್ಯವಾಗಿದೆ. ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿದ್ಯಾರ್ಥಿಗಳು ಕನ್ನಡ ಧ್ವನಿ ಪತ್ರಿಕೆಯ ಮೂಲಕ ಕತೆ, ಕವನಗಳನ್ನು ಪ್ರಕಟಿಸುತ್ತ ಕನ್ನಡದ ಸಾಹಿತ್ಯ ಸೇವೆಯನ್ನು ನಡೆಸುತ್ತ ಬಂದಿದ್ದಾರೆ. ವಿದ್ಯಾರ್ಥಿಗಳು ಗಡಿನಾಡಿನಲ್ಲಿ ನಡೆಸುವ ಈ ಸಾಂಸ್ಕೃತಿಕ ಹೋರಾಟ ನಿರಂತರವಾಗಿರಲಿ. ಸ್ನೇಹರಂಗದ ಚಟುವಟಿಕೆಗಳು ಕನ್ನಡ ವಿದ್ಯಾರ್ಥಿಗಳ ಸೃಜನಶೀಲ ಬದುಕಿಗೆ ದಾರಿದೀಪವಾಗಲಿ" ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಂಘಟನ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನುಡಿದರು. ಅವರು ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿದ್ಯಾರ್ಥಿಗಳ ಸಾಹಿತ್ಯಕ ಮತ್ತು ಸಾಂಸ್ಕೃತಿಕ ವೇದಿಕೆ ಸ್ನೇಹರಂಗದ ವಾರ್ಷಿಕ ಚಟುವಟಿಕೆಗಳ ಉದ್ಘಾಟನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕನ್ನಡ ಧ್ವನಿಯನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ಉಪಪ್ರಾಂಶುಪಾಲೆ ಡಾ.ಮಿನಿ ಪಿ.ವಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಚಿಲುಮೆ ಭಿತ್ತಿಪತ್ರಿಕೆಯನ್ನು ಬಿಡಗಡೆಗೊಳಿಸಿದ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಶಿವಶಂಕರ ಪಿ. ಅವರು “ಭಿತ್ತಿಪತ್ರಿಕೆಗಳು ವಿದ್ಯಾರ್ಥಿಗಳ ಸೃಜನಶೀಲ ಬರವಣಿಗೆಗಳಿಗೆ ಮುಕ್ತ ಅವಕಾಶಗಳನ್ನು ಕಲ್ಪಿಸಿಕೊಡುತ್ತವೆ. ವಿದ್ಯಾರ್ಥಿಗಳು ಬರವಣಿಗೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರಲ್ಲಿ ಸಂಸ್ಕಾರ, ಸಂಸ್ಕೃತಿ ಮತ್ತು ಶಿಸ್ತು ರೂಪುಗೊಳ್ಳುತ್ತದೆ” ಎಂದು ಅಭಿಪ್ರಾಯಪಟ್ಟರು. ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತ ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಕಚೇರಿ ಅಧೀಕ್ಷಕ ದಿನೇಶ ಕೆ. ಎಸ್. ಶುಭ ಹಾರೈಸಿದರು. ಸ್ನೇಹರಂಗದ ಮಾರ್ಗದರ್ಶಕ ಡಾ.ಶ್ರೀಧರ ಎನ್ ಪ್ರಾಸ್ತಾವಿಕ ಭಾಷಣ ಮಾಡಿದರು. ಸ್ನೇಹರಂಗದ ಅಧ್ಯಕ್ಷ ಎ. ವಿವೇಕ್ ಸ್ವಾಗತಿಸಿದರು. ಕಾರ್ಯದರ್ಶಿ ಭರತ್ ಕೆ.ವಂದಿಸಿದರು. ಕನ್ನಡ ಧ್ವನಿ ಸಂಪಾದಕಿ ಸ್ಫೂರ್ತಿ ಎಂ. ಕಾರ್ಯಕ್ರಮ ನಿರ್ವಹಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರಸಿದ್ಧ ಮತ್ತು ಉದಯೋನ್ಮುಖ ಕಲಾವಿದರ ಕೂಡುವಿಕೆಯಿಂದ “ಕೃಷ್ಣಸಂಧಾನ” ಎಂಬ ಯಕ್ಷಗಾನ ತಾಳಮದ್ದಳೆ ಕೂಟ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಹೊಸಮೂಲೆ ಗಣೇಶ ಭಟ್, ಚೆಂಡೆಮದ್ದಳೆಯಲ್ಲಿ ಶ್ರೀಧರ ವಿಟ್ಲ, ಲಕ್ಶ್ಮೀಶ ಬೆಂಗ್ರೊಡಿ ಸಹಕರಿಸಿದರು. ಮುಮ್ಮೇಳದಲ್ಲಿ ಕೃಷ್ಣನಾಗಿ ಪ್ರಸಾದ್ ಸವಣೂರು, ದುರ್ಯೋಧನನಾಗಿ ದಿನೇಶ ಶೆಟ್ಟಿ ಕಾವಳಕಟ್ಟೆ, ವಿದುರನಾಗಿ ದುರ್ಗಾಶಂಕರ ಅಡಿಗ ಶೇಡಿಕಾವು ಮಿಂಚಿದರು. ಅಪರಾಹ್ನ ಸ್ನೇಹರಂಗದ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದುವು.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost
.jpeg)

0 Comments