Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಜಯಕುಮಾರ್ ಕಾರಡ್ಕರಿಂದ ಕಣ್ಣೂರು ಆಕಾಶವಾಣಿಯಲ್ಲಿ ‘ಸ್ವಯಂ ರಕ್ಷಣೆ’ ಫೋನ್-ಇನ್ ಕಾರ್ಯಕ್ರಮ

ಕಾಸರಗೋಡು : ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಉದ್ದೇಶದಿಂದ ಕಣ್ಣೂರು ಆಕಾಶವಾಣಿಯಲ್ಲಿ ಪ್ರಸಾರವಾದ ‘ಸ್ವಯಂ ರಕ್ಷಣೆ’ ಕುರಿತ ನೇರ ಚರ್ಚೆ ಹಾಗೂ ಫೋನ್-ಇನ್ ಕಾರ್ಯಕ್ರಮ ಪ್ರಸಾರವಾಯಿತು.

ಆಧುನಿಕ ಸಮಾಜದಲ್ಲಿ ಸ್ವಯಂ ರಕ್ಷಣೆಯ ಮಹತ್ವ, ತುರ್ತು ಸಂದರ್ಭಗಳಲ್ಲಿ ಎಚ್ಚರಿಕೆಯಿಂದ ಹೇಗೆ ವರ್ತಿಸಬೇಕು ಎಂಬುದರ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು. ಕಾಸರಗೋಡು ಜಿಲ್ಲೆಯ ಕಾರಡ್ಕ ನಿವಾಸಿ ಜಯಕುಮಾರ್ ಅವರು ವಿಷಯವನ್ನು ಮಂಡಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

ನೇರ ಪ್ರಸಾರ ಕಾರ್ಯಕ್ರಮದಲ್ಲಿ ರೇಡಿಯೋ ಶ್ರೋತೃಗಳು ಕೇಳಿದ ಪ್ರಶ್ನೆಗಳಿಗೆ ಜಯಕುಮಾರ್ ಅವರು ನೇರವಾಗಿ ಉತ್ತರ ನೀಡಿದರು. ಆಕಾಶವಾಣಿ ಕೇಂದ್ರದ ಮೂಲಕ ಪ್ರಸಾರವಾದ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಮಾಜದಲ್ಲಿ ಸ್ವಯಂ ರಕ್ಷಣೆಯ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಯೋಗಿಕ ತರಬೇತಿಯ ಅಗತ್ಯವನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿದೆ.

Post a Comment

0 Comments

ಜಾಹೀರಾತು

Responsive Advertisement