Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಖಾನ್ಸಾ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ತರಬೇತಿ

ಕುಂಬಳೆ : ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಹಾಗೂ ಸುರಕ್ಷತೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಖಾನ್ಸಾ  ಮಹಿಳಾ ಕಾಲೇಜಿನಲ್ಲಿ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಭಾಗವಹಿಸಿದರು.

ಕಾಸರಗೋಡು ಜಿಲ್ಲೆಯ ಕಾರಡ್ಕ ನಿವಾಸಿ ಹಾಗೂ ಖ್ಯಾತ ಸ್ವಯಂ ರಕ್ಷಣಾ ತರಬೇತುದಾರ ಜಯಕುಮಾರ್ ಅವರು ತರಬೇತಿ ನೀಡಿದರು. ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಗಳಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ವಿದ್ಯಾರ್ಥಿನಿಯರನ್ನು ಸಜ್ಜುಗೊಳಿಸುವ ಉದ್ದೇಶದಿಂದ ತರಬೇತಿ ಆಯೋಜಿಸಲಾಗಿತ್ತು.

ದೈಹಿಕ ಬಲವನ್ನು ಅವಲಂಬಿಸದೆ ಆಕ್ರಮಣಕಾರರನ್ನು ಎದುರಿಸಲು ಸಾಧ್ಯವಾಗುವ ವಿವಿಧ ಸ್ವಯಂ ರಕ್ಷಣಾ ತಂತ್ರಗಳನ್ನು ಜಯಕುಮಾರ್ ಅವರು ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಸರಳ ವಿಧಾನಗಳ ಮೂಲಕ ದಾಳಿಯನ್ನು ಹೇಗೆ ಎದುರಿಸಬೇಕು ಹಾಗೂ ಭಯವಿಲ್ಲದೆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ತರಬೇತಿ ನೀಡಲಾಯಿತು. ಕಾರ್ಯಕ್ರಮಕ್ಕೆ ವಿದ್ಯಾರ್ಥಿನಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

Post a Comment

0 Comments

ಜಾಹೀರಾತು

Responsive Advertisement