Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಉಡುಪಿಯಲ್ಲಿ ಗುಂಡಿನ ದಾಳಿ : ಕಾಂಗ್ರೆಸ್ ಮುಖಂಡನ ಹತ್ಯೆ

ಉಡುಪಿ : ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ (55) ಮೃತಪಟ್ಟಿದ್ದಾರೆ.

ಮಧ್ಯಾಹ್ನ ಸುಮಾರು 3 ಗಂಟೆಗೆ ಮುದರಂಗಡಿ ಪೇಟೆಯಲ್ಲಿರುವ ಅವರ ಕಚೇರಿ ಸಮೀಪ ಈ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಡೇವಿಡ್ ಡಿಸೋಜಾ ಅವರ ಮೇಲೆ ಸಮೀಪದಿಂದಲೇ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಗುಂಡುಗಳಲ್ಲಿ ಒಂದು ಹಣೆಗೆ ಹಾಗೂ ಇನ್ನೆರಡು ಕೈಗೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಡಿಸೋಜಾ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement