Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸಂಪೂರ್ಣ ಮದ್ಯ ನಿಷೇಧ ಜಾರಿಯಲ್ಲಿರುವ ಗುಜರಾತ್‌ನಲ್ಲಿ ನಕಲಿ ಮದ್ಯ ದುರಂತ

ಭಾವನಗರ : ಸಂಪೂರ್ಣ ಮದ್ಯ ನಿಷೇಧ ಜಾರಿಯಲ್ಲಿರುವ ಗುಜರಾತ್‌ನಲ್ಲಿ ನಕಲಿ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಭಾವನಗರದಲ್ಲಿ ನಡೆದ ಮದ್ಯ ಪಾರ್ಟಿಯಲ್ಲಿ  ಭಾಗವಹಿಸಿದ್ದ ಹಲವರು ನಕಲಿ ಮದ್ಯ ಸೇವನೆಯಿಂದ ಮೃತಪಟ್ಟಿದ್ದಾರೆ. ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಸಂಬಂಧ ಪೊಲೀಸರು 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

 ಘೋಘಾ ತಾಲೂಕಿನ ಖರಾಡಿ ಗ್ರಾಮದಲ್ಲಿ ಏಳು ಸ್ನೇಹಿತರು ಸೇರಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಮದ್ಯ ಸೇವಿಸಿದ ಬಳಿಕ ಕೆಲವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಮೃತಪಟ್ಟಿದ್ದಾರೆ. ಅಸ್ವಸ್ಥರಾದವರನ್ನು ಭಾವನಗರ ಸಿಟಿ ಆಸ್ಪತ್ರೆ, ಆರೋಗ್ಯಂ ಆಸ್ಪತ್ರೆ, ಬಿಐಎಂಎಸ್ ಆಸ್ಪತ್ರೆ ಹಾಗೂ ವೇದ್ ಐಸಿಯು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಅಸ್ವಸ್ಥರನ್ನು ವಿಶೇಷ ವೈದ್ಯಕೀಯ ತಂಡದ ನಿಗಾದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭಾವನಗರ ಹಾಗೂ ಮಧ್ಯಪ್ರದೇಶ ಮೂಲದ ಕೆಲವರು ಸೇರಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಮದ್ಯವನ್ನು ಹೆಚ್ಚಿನ ಬೆಲೆಗೆ ನೈಜ ಮದ್ಯದ ಬಾಟಲಿಗಳಲ್ಲಿ ತುಂಬಿ, ನೈಜ ಮದ್ಯವೆಂದು ನಂಬಿಸಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಆರೋಪಿಗಳು ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಒಟ್ಟು ಎಷ್ಟು ಬಾಟಲಿ ನಕಲಿ ಮದ್ಯ ಮಾರಾಟ ಮಾಡಲಾಗಿದೆ ಹಾಗೂ ಯಾವೆಲ್ಲ ಪ್ರದೇಶಗಳಿಗೆ ಮದ್ಯವನ್ನು ವಿತರಿಸಲಾಗಿದೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಕಲಿ ಮದ್ಯದ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಸಂಪೂರ್ಣ ಮದ್ಯ ನಿಷೇಧ ಜಾರಿಯಲ್ಲಿರುವ ರಾಜ್ಯದಲ್ಲಿ ಇಂತಹ ದುರಂತ ಮರುಕಳಿಸಿರುವುದು ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ.

Post a Comment

0 Comments

ಜಾಹೀರಾತು

Responsive Advertisement