Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ವಿದ್ಯಾರ್ಥಿ ಮುಳುಗಿ ಸಾವು

ಉಪ್ಪಳ : ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ 13 ವರ್ಷದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಲ್ಪಾಡಿಯ ಪೆರಿಂಗಡಿಯಲ್ಲಿ ನಡೆದಿದೆ. ಪೆರಿಂಗಡಿಯ ಅಲಿ–ಸುಲೈಖಾ ದಂಪತಿಯ ಪುತ್ರ ಅಬೂಬಕ್ಕರ್ ಅಸಾನ್ ಮೃತ ವಿದ್ಯಾರ್ಥಿ. ಅವರು ಮಂಗಲ್ಪಾಡಿ ಸರ್ಕಾರಿ ಹೈಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿಯಾಗಿದ್ದರು.

ಮಂಗಳವಾರ ಸಂಜೆ ಸುಮಾರು 5 ಗಂಟೆಗೆ ಅಬೂಬಕ್ಕರ್ ಅಸಾನ್ ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿದ್ದರೆಂದು ತಿಳಿದುಬಂದಿದೆ.

ಈಜು ಮುಗಿಸಿ ಸ್ನೇಹಿತರು ಮೇಲಕ್ಕೆ ಬಂದಾಗ ಅಬೂಬಕ್ಕರ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಸಮೀಪದ ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸಿದ್ದಾರೆ.

ನಂತರ ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಕೆರೆಯಲ್ಲಿ ಶೋಧ ನಡೆಸಿ ಬಾಲಕನನ್ನು ಪತ್ತೆಹಚ್ಚಿದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement