Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ನೆಟ್ಟಣಿಗೆ ಶ್ರೀ ಮಹಾತೋಬಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಳ್ಳೇರಿಯ : ನೆಟ್ಟಣಿಗೆ ಶ್ರೀ ಮಹಾತೋಬಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ವರದಿಯಾಗಿದೆ. ದೇವಸ್ಥಾನದ ಸುತ್ತುಮಂಟಪದ ಬಳಿ ಇರಿಸಲಾಗಿದ್ದ ಕಾಣಿಕೆ ಡಬ್ಬಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿರುವ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ.


ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುತ್ತುಮಂಟಪದ ಬಾಗಿಲನ್ನು ಸಾಮಾನ್ಯವಾಗಿ ಮುಚ್ಚುವುದಿಲ್ಲ ಎನ್ನಲಾಗಿದೆ. ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. 



ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Post a Comment

0 Comments

ಜಾಹೀರಾತು

Responsive Advertisement