Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಲಾರಿಗೆ ಕಾರು ಡಿಕ್ಕಿಯಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಮೂವರು ಯುವಕರು ದಾರುಣ ಸಾವು

ಚಿಕ್ಕ ಮಗಳೂರು : ಧರ್ಮಸ್ಥಳದ ದರ್ಶನಕ್ಕೆ ತೆರಳುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊಟ್ಟಿಗೆಹಾರದಲ್ಲಿ ಶನಿವಾರ ಮುಂಜಾನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾದ ಜ್ಞಾನೇಶ, ಮೋಹನ ಹಾಗೂ ಗುರುಕಿರಣ್ ಅಪಘಾತದಲ್ಲಿ ಮೃತಪಟ್ಟವರು. ಕಾರಿನಲ್ಲಿದ್ದ ಪ್ರೇಮ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಯುವಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಶಬ್ದ ಕೇಳಿ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹಾಗೂ ಮೃತದೇಹಗಳನ್ನು ಹೊರತೆಗೆಯಲು ನೆರವಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಮೂಡಿಗೆರೆ ಹಾಗೂ ಸ್ಥಳೀಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost


Post a Comment

0 Comments

ಜಾಹೀರಾತು

Responsive Advertisement