Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನ ಮಾಡಿ ಸಂದೇಶ ಸಾರಿದ ಶಾರ್ಜಾದ ಕರ್ನಾಟಕ ಸಂಘದ ಸದಸ್ಯರು


ದುಬೈ : ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು ಎಫ್.ಒ.ಐ. ಸಹಯೋಗದಲ್ಲಿ ದುಬಾಯಿಯಲ್ಲಿ ಆಯೋಜಿಸಿದ ರಕ್ತದಾನ ಶಿಬಿರವು 2026 ಆಗಸ್ಟ್ 16ನೇ ತಾರೀಕಿನಂದು ದುಬೈ, ಹೆಲ್ತ್ ಅಥಾರಿಟಿ ಹೆಡ್ ಕ್ವಾರ್ಟ್ರಸ್ ಅಲ್ ಜಡಾಫ್ ನಲ್ಲಿ ಮಾನವೀಯತೆ, ಸೇವಾ ಮನೋಭಾವ ಮತ್ತು ಸಾಮಾಜಿಕ ಬದ್ಧತೆಯ ಪ್ರತೀಕವಾಗಿ ಗಮನ ಸೆಳೆಯಿತು.

ದೇಶದ ಸ್ವಾತಂತ್ರ್ಯೋತ್ಸವವನ್ನು ಕೇವಲ ಸಂಭ್ರಮಿಸುವುದಕ್ಕೆ ಸೀಮಿತಗೊಳಿಸದೆ, “ದೇಶ ಸೇವೆಯೇ ಮಾನವ ಸೇವೆ” ಎಂಬ ಸಂದೇಶದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಿರುವುದು ಕರ್ನಾಟಕ ಸಂಘ ಶಾರ್ಜಾದ ಸಮಾಜಮುಖಿ ಕಾರ್ಯಗಳಿಗೆ ಮತ್ತೊಂದು ಮಹತ್ವದ ಸೇರ್ಪಡೆಯಾಗಿದೆ. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಉತ್ಸಾಹದಿಂದ ಪಾಲ್ಗೊಂಡು ಅಮೂಲ್ಯವಾದ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳ ಉಳಿವಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಿದರು.

ರಕ್ತದಾನದಂತಹ ಮಹತ್ವದ ಸೇವಾ ಕಾರ್ಯವು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮನೋಭಾವವನ್ನು ಇನ್ನಷ್ಟು ಬಲಪಡಿಸುತ್ತದೆ. ಒಬ್ಬ ವ್ಯಕ್ತಿಯ ರಕ್ತದಾನ ಮತ್ತೊಬ್ಬರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಬಲ್ಲದು ಎಂಬ ಅರಿವಿನೊಂದಿಗೆ ರಕ್ತದಾನಿಗಳು ಶಿಬಿರದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ದುಬೈ,ಯಲ್ಲಿರುವ ಭಾರತೀಯ ದೂತಾವಾಸ ಕಚೇರಿಯ ಗೌರವಾನ್ವಿತ ಕಾನ್ಸುಲ್ ಜನರಲ್ ಡಾ. ವಿಷ್ಣುವರ್ಧನ್ ರೆಡ್ಡಿ ಅವರು ಕಾರ್ಯಕ್ರಮಕ್ಕೆ ಆಗಮಿಸಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಸಂಘ ಶಾರ್ಜಾ ವತಿಯಿಂದ ಅವರನ್ನು ಕರ್ನಾಟಕ ಸಂಘ ಶಾರ್ಜಾದ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ನಿರ್ದೇಶಕ ಪ್ರವೀಣ್ ಕುಮಾರ್ ಶೆಟ್ಟಿಯವರು ಮತ್ತು ಸಲಹಾ ಸಮಿತಿಯ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಅರ್ಥಪೂರ್ಣ ಸೇವಾ ಕಾರ್ಯಕ್ರಮದ ಯಶಸ್ಸಿನ ಹಿಂದೆ ಕರ್ನಾಟಕ ಸಂಘ ಶಾರ್ಜಾದ ಆಡಳಿತ ಮಂಡಳಿಯ ನಿರ್ದೇಶಕರು, ಸಲಹಾ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರ ಪರಿಶ್ರಮ, ಸಂಘಟನಾ ಸಾಮರ್ಥ್ಯ ಮತ್ತು ನಿಸ್ವಾರ್ಥ ಸೇವೆ ಮಹತ್ವದ ಪಾತ್ರ ವಹಿಸಿದೆ. ಶಿಬಿರದ ಪೂರ್ವಭಾವಿ ಸಿದ್ಧತೆಗಳಿಂದ ಹಿಡಿದು ಕಾರ್ಯಕ್ರಮದ ಯಶಸ್ವಿ ನಿರ್ವಹಣೆಯವರೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನಾರ್ಹರು ಅದೇ ರೀತಿ, ಶಿಬಿರದಲ್ಲಿ ಸ್ವಯಂಪ್ರೇರಣೆಯಿಂದ ಪಾಲ್ಗೊಂಡು ರಕ್ತದಾನ ಮಾಡಿದ ಎಲ್ಲಾ ರಕ್ತದಾನಿಗಳು, ಕಾರ್ಯಕ್ರಮಕ್ಕೆ ಬೆಂಬಲ ಮತ್ತು ಸಹಕಾರ ನೀಡಿದ ಸದಸ್ಯರು, ಸ್ವಯಂಸೇವಕರು, ಹಿತೈಷಿಗಳು ಹಾಗೂ ಸಹಯೋಗಿಗಳಿಗೆ ಕರ್ನಾಟಕ ಸಂಘ ಶಾರ್ಜಾ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.

ಸ್ವಾತಂತ್ರ್ಯದ ಸಂಭ್ರಮಕ್ಕೆ ಸೇವೆಯ ಸ್ಪರ್ಶ ನೀಡಿದ ಈ ರಕ್ತದಾನ ಶಿಬಿರವು, ಭಾರತೀಯರ ಒಗ್ಗಟ್ಟು, ಸೇವಾ ಮನೋಭಾವ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಾರಿದ ಅರ್ಥಪೂರ್ಣ ಕಾರ್ಯಕ್ರಮವಾಗಿ ಮೂಡಿಬಂದಿದೆ.

Post a Comment

0 Comments

ಜಾಹೀರಾತು

Responsive Advertisement