ಕುಂಬಳೆ : ಕಳತ್ತೂರಿನ ಶ್ರೀ ಮಹಾದೇವ ಸಭಾಂಗಣದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಶ್ರದ್ಧಾ-ಭಕ್ತಿ ಹಾಗೂ ಸಡಗರದಿಂದ ನೆರವೇರಿತು.
ಮಹಿಳಾ ಸಮಿತಿ ಅಧ್ಯಕ್ಷೆ ಚಿತ್ರಾವತಿ ಶ್ರೀನಗರ, ಕಾರ್ಯದರ್ಶಿ ಜಯಶ್ರೀ ಕಳತ್ತೂರು, ಮಂದಿರದ ಅಧ್ಯಕ್ಷ ಮೋಹನ್ ಕುಮಾರ್ ಆಚಾರ್ಯ, ಕಾರ್ಯದರ್ಶಿ ಗೋಪಾಲಕೃಷ್ಣ ಹಾಗೂ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ನೆಲ್ಲಿಡ್ಕ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮಾಜ ಸೇವಕ ಜೀವನಾಥ್ ಜೋಡುಕಟ್ಟೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಸಮಿತಿಯ ಸದಸ್ಯರು, ಭಕ್ತಾದಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.


0 Comments