Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಡಿಕೆ ಹೆಕ್ಕಲು ತೆರಳಿದ್ದ ಮಹಿಳೆ ನಾಪತ್ತೆ ; ತೀವ್ರ ಶೋಧ

ಅಡೂರು : ಅಡಿಕೆ ಹೆಕ್ಕಲು ತೆರಳಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಮಲ್ಲಂಪಾರ ತಿಮ್ಮನಕುಂಡದಲ್ಲಿ ನಡೆದಿದೆ. ದಿ. ಚೋಮಣ್ಣ ನಾಯ್ಕ್ ಅವರ ಪತ್ನಿ ಗುಲಾಬಿ ಬಾಯಿ (66) ನಾಪತ್ತೆಯಾಗಿರುವವರು.

ಬುಧವಾರ ಸಂಜೆ ಸುಮಾರು 4.30ರ ವೇಳೆಗೆ ಮನೆಯ ಸಮೀಪದ ಅಡಿಕೆ ತೋಟಕ್ಕೆ ಅಡಿಕೆ ಹೆಕ್ಕಲು ತೆರಳಿದ್ದ ಗುಲಾಬಿ ಬಾಯಿ ಬಳಿಕ ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಹುಡುಕಾಟ ನಡೆಸಿದಾಗ ತೋಟದ ಸಮೀಪದ ತೋಡಿನ ಬಳಿ ಅವರ ಚಪ್ಪಲಿಗಳು ಪತ್ತೆಯಾಗಿವೆ. ತೋಡಿಗೆ ಬಿದ್ದಿರಬಹುದೆಂಬ ಶಂಕೆಯಿಂದ ಸ್ಥಳೀಯರು ವ್ಯಾಪಕವಾಗಿ ಹುಡುಕಾಟ ನಡೆಸಿದರೂ ಪತ್ತೆಯಾಗಲಿಲ್ಲ. ಬಳಿಕ ಆದೂರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಜಂಟಿಯಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement